ETV Bharat / state

Annabhagya Scheme: ನಾಳೆಯಿಂದಲೇ ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮೆ... ಸಚಿವ ಕೆ ಹೆಚ್ ಮುನಿಯಪ್ಪ

ಶನಿವಾರದಿಂದ ಅಕ್ಕಿ ಬದಲಾಗಿ ಬಿಪಿಎಲ್ ಕಾರ್ಡ್​ದಾರರ ಅಕೌಂಟ್​ಗೆ 170 ರೂಪಾಯಿ ಹಾಕುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಸಚಿವ ಕೆ.ಹೆಚ್.ಮುನಿಯಪ್ಪ
ಸಚಿವ ಕೆ.ಹೆಚ್.ಮುನಿಯಪ್ಪ
author img

By

Published : Jun 30, 2023, 1:30 PM IST

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಶನಿವಾರದಿಂದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಕಾರ್ಯಕ್ರಮ ಶುರುವಾಗುತ್ತಿದೆ. ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. 90% ಬಿಪಿಎಲ್ ಫಲಾನುಭವಿಗಳ ಖಾತೆ ಇವೆ ಅಂತ ಮಾಹಿತಿ ಇದೆ ಎಂದರು.

ಹಾಗೆ ಖಾತೆ ಇಲ್ಲದವರು ಅಕೌಂಟ್ ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವವರೆಗೆ ಈ ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು. ಅಕ್ಕಿ ಸಿಕ್ಕ ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ದಕ್ಷಿಣದಲ್ಲಿ ರಾಗಿ ಕೊಡುತ್ತೇವೆ. ಉತ್ತರದಲ್ಲಿ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಹಣ ರೆಡಿ ಇದೆ, ಅಕೌಂಟ್​ಗೆ ವರ್ಗಾವಣೆ ಆಗಲಿದೆ. ನಾಳೆಯಿಂದಾನೇ ಅಕೌಂಟ್​ಗೆ ಹಣ ಹೋಗಲಿದೆ ಎಂದು ಪ್ರತಿಕ್ರಿಯೆ ನೀಡಿದರು.

ಅನ್ನಭಾಗ್ಯ ಯೋಜನೆಗೆ ಸಮಾವೇಶ ಅವಶ್ಯಕತೆ ಇಲ್ಲ. ನಾಳೆಯಿಂದ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಎಂಎಸ್​ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1 ರಿಂದ ಯೋಜನೆ ಜಾರಿ ಆಗಲಿದೆ. ಈಗ ಅಕ್ಕಿ ಬದಲು ಹಣ ವರ್ಗಾವಣೆ ಮಾಡುತ್ತೇವೆ ಎಂದರು.

ಮುಂದುವರೆದು ಕೇಂದ್ರ ಸರ್ಕಾರ ಮನಸ್ಸು ಬದಲಾಯಿಸಿ ಅಕ್ಕಿ ಕೊಟ್ಟರೆ, ನಾವು ಅಕ್ಕಿ ಹಂಚಿಕೆ ಮಾಡುತ್ತೇವೆ. ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದೆ. ಇಲ್ಲವೆ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ: ಅನ್ನಭಾಗ್ಯ ಘೋಷಣೆ ಮಾಡಿರುವ ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ಅಕ್ಕಿಯ ಕೊರತೆಯಿಂದ ಪಡಿತರದಾರರಿಗೆ ಅಕ್ಕಿ ಬದಲು ಪ್ರತಿ ತಿಂಗಳು ಹಣ ನೀಡಲು ನಿರ್ಧಾರ ಮಾಡಿದೆ. ಆದರೆ ರಾಜ್ಯ ಸರ್ಕಾರದ ಈ ತೀರ್ಮಾನವನ್ನು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ವಿರೋಧಿಸಿದೆ. ಅಕ್ಕಿಯನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಪಿಎಲ್​ ಕಾರ್ಡ್​ದಾರರಿಗೆ 5ಕೆಜಿ ಅಂತೆ ನೀಡುತ್ತಿದೆ. ಹಾಗಾಗಿ ರಾಜ್ಯ ಸರ್ಕಾರವು ರೈತರಿಂದ ನೇರವಾಗಿ ರಾಗಿ, ಜೋಳ, ಗೋಧಿ ಖರೀದಿಸಿ ವಿತರಿಸಬೇಕು. ಇದರಿಂದಾಗಿ ಬೆಳೆ ಬೆಳೆದ ರೈತರಿಗೂ ಅನುಕೂಲವಾಗುತ್ತದೆ. ರಾಜ್ಯದಲ್ಲಿ ಲಕ್ಷಾಂತರ ಟನ್ ರಾಗಿ ದಾಸ್ತಾನಿದೆ. ಅಕ್ಕಿ ಬದಲು ಪರ್ಯಾಯವಾಗಿ 3 ಕೆಜಿ ರಾಗಿ, 2 ಕೆಜಿ ಗೋಧಿ ವಿತರಿಸಿದರೆ ಪಡಿತರದಾರರಿಗೆ ಅನುಕೂಲ. 26 ರೂ.ಗೆ ಸಕ್ಕರೆ ಸಿಗುತ್ತಿದೆ, ಅದನ್ನು ಕೊಡಬಹುದು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವುದಕ್ಕೆ ಪಡಿತರ ಸಂಘ ವಿರೋಧ: ರಾಗಿ, ಜೋಳ, ಗೋಧಿ ವಿತರಿಸಲು ಮನವಿ

ಅನ್ನಭಾಗ್ಯ ಯೋಜನೆ: 10 ಕೆಜಿ ಅಕ್ಕಿ ವಿತರಿಸುವುದು ಕಾಂಗ್ರೆಸ್​ನ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಆದ್ರೆ ಸದ್ಯ ರಾಜ್ಯ ಸರ್ಕಾರದ ಬಳಿ ಅಕ್ಕಿ ಕೊರತೆ ಇರುವುದರಿಂದ 5 ಕೆಜಿ ಅಕ್ಕಿ ಕೊಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ 5 ಕೆಜಿ ಅಕ್ಕಿಯ ಹಣವನ್ನು ಖಾತೆಗೆ ಜಮಾ ಮಾಡಲು ಸರ್ಕಾರ ತೀರ್ಮಾನಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.