ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇತ್ತ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಬೇಡ್ವಾ ಎಂಬುದರ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ.
ಒಂದು ಕಡೆ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಗೆ ಸವಾಲೇ ಎನಿಸಿದೆ. ಇದರ ಜೊತೆಗೆ ಇನ್ನೇನು ಕೆಲ ದಿನಗಳಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೂ ಇಲಾಖೆ ತಯಾರಿ ಮಾಡಿಕೊಳ್ಳಬೇಕು. ಹಾಗಾಗಿ 1 ರಿಂದ 5 ತರಗತಿ ಮಕ್ಕಳಿಗೆ ಆನ್ಲೈನ್ ಪರೀಕ್ಷೆ, 6-9 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸುವ ಕುರಿತು ಚರ್ಚಿಸಬೇಕಿದೆ.
ಈ ಸಂಬಂಧ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬೆಳಗಾವಿಯ ಉಪ ಚುನಾವಣೆ ಪ್ರಚಾರ ಕಾರ್ಯಕ್ಕಾಗಿ ಹೋಗಿದ್ದರಿಂದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿಲ್ಲ. ಹಾಗೇ ಶಿಕ್ಷಣ ಇಲಾಖೆಯ ಆಯುಕ್ತರು ಎರಡ್ಮೂರು ದಿನ ಉಸ್ತುವಾರಿ ಜಿಲ್ಲೆಯ ಪ್ರವಾಸದಲ್ಲಿದ್ದರು. ಹೀಗಾಗಿ, ಮುಂದಿನ ಗುರುವಾರ ಈ ಕುರಿತು ಚರ್ಚೆ ನಡೆಸಲಾಗುವುದು ಅಂತ ತಿಳಿಸಿದ್ದಾರೆ.
ಶನಿವಾರ ಅಥವಾ ಭಾನುವಾರ ಸರ್ಕಾರಿ ರಜೆ ಇದ್ದಿದ್ದರಿಂದ ಹಾಗೂ ಯುಗಾದಿ ಹಬ್ಬ ಮುಗಿದ ನಂತರ ಸಚಿವರು ಸಭೆ ನಡೆಸಲಿದ್ದಾರೆ.