ಬೆಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಿವಾಸಿಯೊಬ್ಬನನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಮದ್ ರುಹುಲ್ಲಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಈತ ಕೆ ಜಿ ಹಳ್ಳಿಯಲ್ಲಿ ಒಂದು ಕಾರ್ಯಕ್ರಮಕ್ಕೆ ಆಗಮಿಸಿದ್ದಾನೆ. ಆ ಕಾರ್ಯಕ್ರಮಕ್ಕೆ ಮೈಸೂರಿನ ಪೂರ್ವ ವಿಭಾಗ ಪೊಲೀಸರು ಬಂದಿದ್ದಾರೆ. ಈ ವೇಳೆ ಆತನನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.
ಶಾರಿಕ್ ಜೊತೆಗೆ ನಿರಂತರ ಸಂಪರ್ಕದಲ್ಲಿ ಇದ್ದ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಮಹಮದ್ ರುಹುಲ್ಲಾ ಎಂಬಾತನನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ.
ಓದಿ: ಸ್ಫೋಟದ ಪ್ರಮುಖ ಆರೋಪಿ ಶಾರೀಕ್ಗೆ ಐಸಿಸ್ ಉಗ್ರ ಸಂಘಟನೆ ಪ್ರೇರಣೆ: ಎಡಿಜಿಪಿ ಅಲೋಕ್ ಕುಮಾರ್