ETV Bharat / state

ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ - ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣ

ವ್ಯಕ್ತಿಗೆ ಶೇ.30ರಷ್ಟು ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೈಸೂರು ಬಳಿ ಓಡಾಡಿಕೊಂಡಿದ್ದ ಆರೋಪಿ ಜನತಾ ಅದಕ್​ನನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ..

Another acid attack in Bengaluru
Another acid attack in Bengaluru
author img

By

Published : May 31, 2022, 1:13 PM IST

ಬೆಂಗಳೂರು : ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ನಡೆದ ಆ್ಯಸಿಡ್​ ದಾಳಿ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಕಬ್ಬನ್‌ಪೇಟೆ 10ನೇ ಕ್ರಾಸ್​ನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Another acid attack in Bengaluru
ಬಂಧಿತ ಆರೋಪಿ ಜನತಾ ಅದಕ್

ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ರು. ಭಾನುವಾರ ಕ್ಷುಲ್ಲಕ ವಿಚಾರಕ್ಕೆ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಜನತಾ ಅದಕ್ ಡೈಲೂಟೇಡ್ ಸೆಲ್ಫುರಿಕ್ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ.

ಇದನ್ನೂ ಓದಿ: ಕೊನೆಗೂ ಆ್ಯಸಿಡ್​ ನಾಗನ ಬಂಧನ.. ಖಾವಿ ಧರಿಸಿ ಧ್ಯಾನ ಮಾಡುತ್ತಿದ್ದಾಗಲೇ ಪೊಲೀಸ್ ಬಲೆಗೆ!

ವ್ಯಕ್ತಿಗೆ ಶೇ.30ರಷ್ಟು ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೈಸೂರು ಬಳಿ ಓಡಾಡಿಕೊಂಡಿದ್ದ ಆರೋಪಿ ಜನತಾ ಅದಕ್​ನನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.