ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 25 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆ ಆಗಿದ್ದು, ಸಾವನ್ನಪ್ಪಿರುವ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಏಪ್ರಿಲ್ 16 ರಂದು ಸೋಂಕಿತ 374 ವ್ಯಕ್ತಿ ತಾವು ಜೊತೆಯಾಗಿ ಬಂದ ಪಿ-306, ಪಿ -308 ವ್ಯಕ್ತಿಗಳಿಗೆ ಸೋಂಕಿದೆ ಎಂಬ ಮಾಹಿತಿ ತಿಳಿದು ಅದರ ಭಯದಿಂದಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಈತ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದು, ಮಾದರಿ ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈವರೆಗೆ 104 ಜನರು ಡಿಸ್ಜಾರ್ಜ್ ಆಗಿದ್ದು, ಉಳಿದ ಪ್ರಕರಣಗಳಲ್ಲಿ 263 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ. 3 ಜನರನ್ನು ತೀವ್ರ ನಿಗಾ ಘಟಕಗಳಲ್ಲಿ ಇರಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 12,413 ವ್ಯಕ್ತಿಗಳನ್ನು ನಿಗಾದಲಿಡಲಾಗಿದೆ. ರಾಜ್ಯದಲ್ಲಿ ಪರೀಕ್ಷಿಸಲಾಗಿರುವ 19,186 ಮಾದರಿಗಳ ಪೈಕಿ 384 ಮಾದರಿಗಳು ಖಚಿತಗೊಂಡಿದೆ.