ETV Bharat / state

ಬೆಂ.ನಗರ ಜಿಲ್ಲಾಧಿಕಾರಿ ಶ್ರೀನಿವಾಸ್​ಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಮತದಾರರ ಮಾಹಿತಿ ಕಳವು ಆರೋಪ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೇರಿ ಇಬ್ಬರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

anticipatory-bail-denied-for-dc-shrinivas-in-voter-id-deletion-case
ಬೆಂ.ನಗರ ಜಿಲ್ಲಾಧಿಕಾರಿ ಶ್ರೀನಿವಾಸ್​ಗೆ ನಿರೀಕ್ಷಣಾ ಜಾಮೀನು ನಿರಾಕರಣೆ
author img

By

Published : Dec 8, 2022, 10:36 PM IST

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮೀ ಮತ್ತು ಕೆಂಪೇಗೌಡ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶ ಸಿ.ಆರ್. ಹೇಮಂತ್ ಕುಮಾರ್ ಅವರಿದ್ದ ಪೀಠ ಆದೇಶಿಸಿದೆ. ಇದರೊಂದಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಬಂಧನ ಭೀತಿ ಹೆಚ್ಚಾಗಿದೆ.

ಪ್ರಕರಣ ಸಂಬಂಧ ವಿವರಣೆ ನೀಡಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳೆದ ವಾರ ಕೆ.ಶ್ರಿನಿವಾಸ್ ಅವರಿಗೆ ಹಲಸೂರು ಗೇಟ್ ಠಾಣಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದರು. ವಿಚಾರಣೆಗೆ ಹಾಜರಾಗದ ಶ್ರಿನಿವಾಸ್ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಡಿ.2ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಂಬಂಧ ವಿಚಾರಣೆ ಪೂರ್ಣಗೊಳಿಸಿ ಡಿ.7ರಂದು ಕಾಯ್ದಿಸಿರಿದ್ದ ತೀರ್ಪನ್ನು ನ್ಯಾಯಾಲಯ ಗುರುವಾರ ಪ್ರಕಟಿಸಿದೆ.

ಇದನ್ನೂ ಓದಿ: ಬೆಂ.ನಗರ ಡಿಸಿ ಶ್ರೀನಿವಾಸ್ ಅಮಾನತು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.