ETV Bharat / state

ಖಾಸಗಿ ಸುದ್ದಿ ವಾಹಿನಿ ಎಂಡಿ ರಾಕೇಶ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು - MD Rakesh Shetty

ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ರಾಕೇಶ್ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ..

anticipatory bail to Private news channel MD Rakesh Shetty
ಖಾಸಗಿ ಸುದ್ದಿ ವಾಹಿನಿ ಎಂಡಿ ರಾಕೇಶ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು
author img

By

Published : Nov 18, 2020, 7:49 PM IST

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದಕ್ಕೆ ಪ್ರತಿಯಾಗಿ ಡೆವಲಪರ್ ಓರ್ವ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದು, ಖಾಸಗಿ ಸುದ್ದಿ ವಾಹಿನಿಯ ಎಂಡಿ ರಾಕೇಶ್ ಶೆಟ್ಟಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, ಮನವಿಯನ್ನು ಷರತ್ತು ಬದ್ಧವಾಗಿ ಪುರಸ್ಕರಿಸಿದೆ. ಅರ್ಜಿದಾರ ₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಒದಗಿಸಬೇಕು.

ಮುಂದಿನ 20 ದಿನಗಳಲ್ಲಿ ತನಿಖಾಧಿಕಾರಿ ಎದುರು ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ರಾಕೇಶ್ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಅರ್ಜಿದಾರ ರಾಕೇಶ್ ಶೆಟ್ಟಿ ಪರ ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್ ಹಾಗೂ ಎ.ಎಸ್. ಪೊನ್ನಣ್ಣ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ :

ರಾಕೇಶ್ ಶೆಟ್ಟಿ ಮಾಲೀಕತ್ವದ ಸುದ್ದಿ ವಾಹಿನಿ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸಿಎಂ ಹಾಗೂ ಅವರ ಪುತ್ರನ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಎಂಡಿ ಚಂದ್ರಕಾಂತ್ ರಾಮಲಿಂಗಂ ತಮಗೆ ರಾಕೇಶ್ ಶೆಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿ ಕೆಪಿ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಫ್ಐಆರ್ ದಾಖಲಾಗುತ್ತಿದ್ದಂತೆ ಸರ್ಕಾರದ ಸೂಚನೆ ಮೇರೆಗೆ ಸಿಸಿಬಿ ಪೊಲೀಸರು ರಾಕೇಶ್ ಶೆಟ್ಟಿ ನಿವಾಸ ಹಾಗೂ ಸುದ್ದಿ ವಾಹಿನಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ, ಸುದ್ದಿವಾಹಿನಿಯ ಕೆಲ ಪ್ರಮುಖ ಉಪಕರಣಗಳು ಹಾಗೂ ವಾಹಿನಿಗೆ ಸೇರಿದ ಎಲ್ಲ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ವಶಕ್ಕೆ ಪಡೆದು ಅವುಗಳನ್ನು ನಿರ್ಬಂಧಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವ ಭೀತಿಯಲ್ಲಿ ರಾಕೇಶ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.