ETV Bharat / state

ನಾಮಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪ: ಉದಯ್​ ಗರುಡಾಚಾರ್​ ಶಿಕ್ಷೆ ಹೆಚ್ಚಿಸಲು ಮೇಲ್ಮನವಿ

author img

By

Published : Oct 20, 2022, 8:29 PM IST

2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಕೆ ಮಾಡಲಾಗಿದ್ದ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಶಾಸಕ ಉದಯ್​ ಗರುಡಾಚಾರ್ ಹೆಚ್ಚಿನ ಶಿಕ್ಷೆಯನ್ನು ವಿಧಿಸಬೇಕೆಂದು ಕೋರಿ ಮೇಲ್ಮನವಿ ಸಲ್ಲಿಸಲಾಗಿದೆ.

appeal-for-increase-the-sentence-to-mla-udaygarudachar
ನಾಮಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪ : ಶಾಸಕ ಉದಯ್​ ಗರುಡಾಚಾರ್​ ಶಿಕ್ಷೆ ಹೆಚ್ಚಿಸಲು ಮೇಲ್ಮನವಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಸಲ್ಲಿಕೆ ಮಾಡಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಶಾಸಕ ಉದಯ್​ ಗರುಡಾಚಾರ್​ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಕೋರಿ ದೂರುದಾರ ಎಚ್​.ಜಿ.ಪ್ರಶಾಂತ್​ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯ(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ದೂರುದಾರರು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಶಾಸಕ ಉದಯ್​ ಗರುಡಾಚಾರ್​ ಅವರಿಗೆ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಜನಪ್ರತಿನಿಧಿಗಳ ಕಾಯಿದೆಯ ಸೆಕ್ಷನ್​ 125(ಎ) ಪ್ರಕಾರ ಆರೋಪ ಸಾಬೀತಾದಾಗ ಗರಿಷ್ಟ 6 ತಿಂಗಳವರೆಗೂ ಶಿಕ್ಷೆ ವಿಧಿಸುವುದಕ್ಕೆ ಅವಕಾಶವಿದೆ. ಆದರೆ, ನಾಮಕಾವಸ್ಥೆಗೆ 2 ತಿಂಗಳ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ದಂಡದ ಪ್ರಮಾಣವನ್ನೂ ಹೆಚ್ಚಳ ಮಾಡಬೇಕು ಎಂದು ದೂರುದಾರರು ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಕರಣ ಹಿನ್ನೆಲೆ: 2018ರಲ್ಲಿ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲ ಕ್ರಿಮಿನಲ್​ ಪ್ರಕರಣಗಳು ಮತ್ತು ಈ ಸಂಬಂಧ ಇತ್ಯರ್ಥವಾಗಿರುವ ಪ್ರಕರಣಗಳನ್ನು ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡಬೇಕು ಎಂಬ ನಿಯಮವಿದೆ. ಆದರೆ, ಪ್ರಕಾಶ್​ ಶೆಟ್ಟಿ ಎಂಬುವರು ಆರೋಪಿ ಗರುಡಾಚಾರ್ ವಿರುದ್ಧ ಆಶೋಕ ನಗರ ಪೊಲೀಸ್​ ಠಾಣೆಯಲ್ಲಿ ಕ್ರಿಮಿನಲ್​ ಪ್ರಕರಣ ದಾಖಲಾಗಿದ್ದು, ನಗರದ 43ನೆ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಅಂಶವನ್ನು ಗರುಡಾಚಾರ್​ ಅವರು ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡದೆ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ ಎಂದಿದ್ದರು.

ಜತೆಗೆ, ಪತ್ನಿ ಬ್ಯಾಂಕ್​ ಖಾತೆಯ ವಿವರವನ್ನೂ ನೀಡಿದ್ದ ಅರ್ಜಿ ಸಲ್ಲಿಸಿರುವ ದಿನದಂದು ಇದ್ದಂತಹ ಬಾಕಿ ಮೊತ್ತವನ್ನು ಉಲ್ಲೇಖ ಮಾಡಿಲ್ಲ. ಮೇವರಿಕ್​ ಹೋಲ್ಡಿಂಗ್ಸ್ ನಲ್ಲಿ ಬಂಡವಾಳ ಹೂಡಿಕೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಸಂಸ್ಥೆಗೆ ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ಪರಿಶೀಲಿಸಿದ್ದ ಚುನಾವಣಾಧಿಕಾರಿಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದರು.

ಈ ಸಂಬಂಧ ಪ್ರಶಾಂತ್​ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉದಯ್​ ಗರುಡಾಚಾರ್​ ಅವರಿಗೆ ಎರಡು ತಿಂಗಳು ಜೈಲು ಶಿಕ್ಷೆ ವಿಧಿಸಿ, 10 ಸಾವಿರ ರೂ ಗಳ ದಂಡ ಪಾವತಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ ಪರೇಶ್​ ಮೇಸ್ತಾ ತಂದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.