ETV Bharat / state

SC-ST ದೌರ್ಜನ್ಯ ಕೇಸುಗಳ ಮೇಲ್ಮನವಿಗೆ ನಿರಾಸಕ್ತಿ: ಪ್ರಾಸಿಕ್ಯೂಷನ್ ಇಲಾಖೆಯ ವಿವರಣೆ ಕೇಳಿದ ಹೈಕೋರ್ಟ್ - High Court ೠ

ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡದ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಖುಲಾಸೆಯಾದ ಆರೋಪಿಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಸಡ್ಡೆ ತೋರಿಸುತ್ತಿರುವುದಕ್ಕೆ ಹೈಕೋರ್ಟ್​ ಗರಂ ಆಗಿದೆ. ಈ ಕುರಿತು ವಿವರಣೆ ನೀಡುವಂತೆ ಅಭಿಯೋಜನಾ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

Appellant's disinterest in SC-ST violation cases
ಪ್ರಾಸಿಕ್ಯೂಷನ್ ಇಲಾಖೆಯ ವಿವರಣೆ ಕೇಳಿದ ಹೈಕೋರ್ಟ್
author img

By

Published : Apr 1, 2021, 9:46 PM IST

ಬೆಂಗಳೂರು: ಎಸ್​ಸಿ​-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಖುಲಾಸೆಯಾದ ಆರೋಪಿಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರಾಸಕ್ತಿ ತೋರುತ್ತಿರುವ ಕುರಿತು ವಿವರಣೆ ನೀಡುವಂತೆ ಹೈಕೋರ್ಟ್ ಅಭಿಯೋಜನಾ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಎಸ್​ಸಿ​-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡ ನಂತರ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ಬಗ್ಗೆ ವಿವರಣೆ ನೀಡುವಂತೆ ಪ್ರಾಸಿಕ್ಯೂಷನ್ ಇಲಾಖೆಗೆ ನಿರ್ದೇಶಿಸಿ, ವಿಚಾರಣೆಯನ್ನು ಏ.16ಕ್ಕೆ ಮುಂದೂಡಿತು.

2019ರಲ್ಲಿ ಸಮುದಾಯದ ಜನರ ಮೇಲೆ ನಡೆದಿದ್ದ ದೌರ್ಜನ್ಯಗಳಿಗೆ ಎಸ್​ಸಿ​-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗಿದ್ದ 1097 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದರು. ಈ ಪೈಕಿ 39 ಪ್ರಕರಗಳಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸುವಂತೆ ಅಭಿಯೋಜನಾ ಇಲಾಖೆ ಉಪ ನಿರ್ದೇಶಕರು ಶಿಫಾರಸ್ಸು ಮಾಡಿದ್ದರು. 2020ರಲ್ಲಿ 650 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದು, 46 ಪ್ರಕರಣಗಳಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸಲು ಶಿಫಾರಸ್ಸು ಮಾಡಲಾಗಿದೆ. ಈ ವರದಿಯನ್ನು ಗಮನಿಸಿದ ಪೀಠ, ವಿವರಣೆ ನೀಡುವಂತೆ ಪ್ರಾಸಿಕ್ಯೂಷನ್ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.