ಬೆಂಗಳೂರು: ಸಿವಿಲ್ ನ್ಯಾಯಾಧೀಶರ 94 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಹೈಕೋರ್ಟ್ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಓದಿ: ಶೇ.50ರಷ್ಟು ಮಿತಿ ಆದೇಶ ಹಿಂಪಡೆಯುವಂತೆ ಚಿತ್ರರಂಗ ನಿಯೋಗದಿಂದ ಸಿಎಂಗೆ ಮನವಿ
ಈ ಕುರಿತು ಹೈಕೋರ್ಟ್‌ನ ಪ್ರಭಾರ ರಿಜಿಸ್ಟ್ರಾರ್ ಜನರಲ್ ಹಾಗೂ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ಕಾರ್ಯದರ್ಶಿ ಟಿ. ಜಿ. ಶಿವಶಂಕರೇಗೌಡ ಅಧಿಸೂಚನೆ ಹೊರಡಿಸಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ಆನ್‌ಲೈನ್ ಮೂಲಕ ಶುಲ್ಕ ಸಂದಾಯ ಮಾಡಲು ಏಪ್ರಿಲ್ 30 ಕಡೆಯ ದಿನವಾಗಿದೆ.
ಚಲನ್ ಮೂಲಕ ಶುಲ್ಕ ಸಂದಾಯ ಮಾಡಲು ಏಪ್ರಿಲ್ 30 ರಂದು ಬ್ಯಾಂಕಿನ ಕೆಲಸದ ಅವಧಿಯಲ್ಲಿ ಸಂದಾಯ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಹೈಕೋರ್ಟ್ ವೆಬ್ಸೈಟ್ ನ ನೋಟಿಫಿಕೇಷನ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.