ETV Bharat / state

Gruha Lakshmi Scheme: ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ - ಗೃಹಲಕ್ಷ್ಮಿ ಯೋಜನೆ

ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ.

Lakshmi Hebbalkar
ಲಕ್ಷ್ಮಿ ಹೆಬ್ಬಾಳ್ಕರ್
author img

By

Published : Jun 15, 2023, 12:23 PM IST

Updated : Jun 15, 2023, 2:37 PM IST

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ

ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. ಶುಭ ಶುಕ್ರವಾರ ಎಂಬಂತೆ ನಾಳೆಯಿಂದ ಈ ಯೋಜನೆಯನ್ನು ಲೋಕಾರ್ಪಣೆ ಮಾಡಲು ಸರ್ಕಾರ ಎಲ್ಲಾ ರೀತಿಯಿಂದ ಸಜ್ಜಾಗಿದೆ.

ಈ ಕುರಿತು ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ , " ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬೇಕು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಕೊಡುವಂತಿಲ್ಲ. ಆಧಾರ್ ಕಾರ್ಡ್ ಓಟಿಪಿ ನೀಡಬೇಕಾಗುತ್ತದೆ " ಎಂದರು.

"ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಉಚಿತವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಟ್ಟಿಲ್ಲ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಈ ಮೂಲಕ ಮನೆಯ ಯಜಮಾನಿ ಶಕ್ತಿ ಶಾಲಿಯಾಗುತ್ತಾಳೆ. ಆಗ ಸಮಾಜದ ಶಕ್ತಿ ವೃದ್ಧಿಯಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್​ನವರಿಗೆ ಈ ಯೋಜನೆಯ ಲಾಭ ಸಿಗುತ್ತದೆ " ಎಂದು ತಿಳಿಸಿದರು.

ಇದನ್ನೂ ಓದಿ : ಗೃಹ ಲಕ್ಷ್ಮಿ ಯೋಜನೆಗೆ ಮನೆಯೊಡತಿಯ ಮಗನ ತೆರಿಗೆ ಪಾವತಿ ಪರಿಗಣಿಸುವುದಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

"ಕೆಲವೊಂದು ಕಾರಣಗಳಿಂದ ಯೋಜನೆ ಜಾರಿಗೆ ಒಂದು ದಿನ ತಡವಾಗಿದೆ. ಜೂನ್ 16 ರಿಂದ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೂಲಕ ಭೌತಿಕವಾಗಿ ಕೂಡ ಅರ್ಜಿ ಸಲ್ಲಿಸಬಹುದು. ನಾಳೆ ಮಧ್ಯಾಹ್ನ 1.30 ರ ನಂತರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ" ಎಂದರು.

ಇದನ್ನೂ ಓದಿ : ಎಲ್ಲರಿಗೂ 200 ಯೂನಿಟ್​ ಫ್ರೀ ವಿದ್ಯುತ್​​​ .. ಗೃಹ ಲಕ್ಷ್ಮಿ ಆಗಸ್ಟ್​ 15ರಿಂದ ಜಾರಿ.. ಮಹಿಳೆಯರಿಗೆ ಜೂನ್​ 11 ರಿಂದ ಬಸ್​​ ಫ್ರೀ!

ನಾಳೆ ಸಿಎಂ ಸೇವಾ ಸಿಂಧು ವೆಬ್​ಸೈಟ್ ಲಾಂಚ್ : ಸಾಂಕೇತಿಕವಾಗಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಭವನದಲ್ಲಿ ಸೇವಾ ಸಿಂಧು ವೆಬ್​​ಸೈಟ್ ಲಾಂಚ್ ಮಾಡಲಿದ್ದು, ಅವರೇ ಸಾಂಕೇತಿಕವಾಗಿ ಐದು ಫಲಾನುಭವಿಗಳಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಏನಾದರೂ ಗೊಂದಲಗಳಿದ್ದರೆ 1902 ಸಹಾಯವಾಣಿಗೆ ಕರೆ ಮಾಡಿ, ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಅರ್ಜಿ ಹಾಕುವ ಪತ್ನಿಯ ಪತಿಯು ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಈ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ಮನೆ ಮನೆಗೂ ಗೃಹಲಕ್ಷ್ಮಿ ; ಆಗಸ್ಟ್ 15 ರಿಂದ 2000 ರೂ. ಹಣ ಜಾರಿ : ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ : ಬಾಡಿಗೆದಾರರಿಗೂ ಗೃಹಜ್ಯೋತಿ ಉಚಿತ ವಿದ್ಯುತ್ .. ತೆರಿಗೆ ಪಾವತಿದಾರರಿಗಿಲ್ಲ ಗೃಹ ಲಕ್ಷ್ಮಿ ಯೋಜನೆ

Last Updated : Jun 15, 2023, 2:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.