ETV Bharat / state

ಬಿಬಿಎಂಪಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - Application for questioning of BBMP Act

ಬಿಬಿಎಂಪಿ ಕಾಯ್ದೆ-2020ನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High court
ಹೈಕೋರ್ಟ್
author img

By

Published : Feb 17, 2021, 8:04 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಯ್ದೆ-2020ನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ನಗರದ ಮಲ್ಲಿಕಾರ್ಜುನ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಅವರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಮೇಯರ್ ಹಾಗೂ ಉಪ ಮೇಯರ್‌ಗಳ ಮೀಸಲಾತಿ, ಶಾಸಕರ ನೇತೃತ್ವದಲ್ಲಿ ಸಲಹಾ ಸಮಿತಿ ಸ್ಥಾಪನೆ, ಜಾಹೀರಾತು ಶುಲ್ಕ ಹಾಗೂ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸಂಬಂಧಿಸಿದ ಬಿಬಿಎಂಪಿ ಕಾಯ್ದೆ-2020ರಲ್ಲಿ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳು ಸಂವಿಧಾನದ ವಿಧಿಗಳು, ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆ ಮತ್ತು ಬಿಬಿಎಂಪಿಯ ಕಟ್ಟಡಗಳ ಬೈಲಾ-2013ರ ನಿಯಮಗಳಿಗೆ ತದ್ವಿರುದ್ಧವಾಗಿವೆ. ಆದ್ದರಿಂದ ಬಿಬಿಎಂಪಿ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.