ETV Bharat / state

ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರ-ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - Bangalore news

ರಾಜ್ಯ ಸರ್ಕಾರ ಕಡ್ಡಾಯ ಸೇವೆ ಕಾಯ್ದೆಯನ್ನು 2012ರಲ್ಲಿ ಜಾರಿ ಮಾಡಿದೆ. 2019ರ ಆಗಸ್ಟ್​ನಲ್ಲಿ ಹೈಕೋರ್ಟ್ ಕಾಯ್ದೆಯ ಸಿಂಧುತ್ವವನ್ನೂ ಎತ್ತಿಹಿಡಿದಿದೆ. ಆದರೆ, ಕೇಂದ್ರ ಸರ್ಕಾರ 2019ರ ಸೆಪ್ಟೆಂಬರ್​ನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ರಚಿಸಿದ್ದು, ವೈದ್ಯಕೀಯ ಕೋರ್ಸ್​ಗಳ ಪ್ರವೇಶಾತಿಗೆ ಸಂಬಂಧಿಸಿದ ಎಲ್ಲಾ ಅಧಿಕಾರ ಎನ್ಎಂಸಿಗೆ ಸೇರಿದೆ.

high court
ಹೈಕೋರ್ಟ್
author img

By

Published : Apr 14, 2021, 7:56 PM IST

ಬೆಂಗಳೂರು: ವೈದ್ಯಕೀಯ ಪದವಿ ಪೂರೈಸಿದ ಅಭ್ಯರ್ಥಿಗಳಿಂದ ಕಡ್ಡಾಯ ಸೇವೆ ಕಾಯ್ದೆ-2012 ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ,ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿರುವ ಶರಣ್ಯ ಮೋಹನ್ ಹಾಗೂ ಇತರೆ 43 ಮಂದಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ದೇವದಾಸ್ ಅವರಿದ್ದ ಪೀಠ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್ಎಂಸಿ) ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಿದೆ.

ಅರ್ಜಿದಾರರ ಕೋರಿಕೆ:

ರಾಜ್ಯ ಸರ್ಕಾರ ಕಡ್ಡಾಯ ಸೇವೆ ಕಾಯ್ದೆಯನ್ನು 2012ರಲ್ಲಿ ಜಾರಿ ಮಾಡಿದೆ. 2019ರ ಆಗಸ್ಟ್​ನಲ್ಲಿ ಹೈಕೋರ್ಟ್ ಕಾಯ್ದೆಯ ಸಿಂಧುತ್ವವನ್ನೂ ಎತ್ತಿಹಿಡಿದಿದೆ. ಆದರೆ, ಕೇಂದ್ರ ಸರ್ಕಾರ 2019ರ ಸೆಪ್ಟೆಂಬರ್​ನಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ರಚಿಸಿದ್ದು, ವೈದ್ಯಕೀಯ ಕೋರ್ಸ್​ಗಳ ಪ್ರವೇಶಾತಿಗೆ ಸಂಬಂಧಿಸಿದ ಎಲ್ಲಾ ಅಧಿಕಾರ ಎನ್ಎಂಸಿಗೆ ಸೇರಿದೆ. ರಾಜ್ಯ ಸರ್ಕಾರಗಳಿಗೆ ಈ ವಿಚಾರದಲ್ಲಿ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶನಾಲಯ 2021ರ ಫೆ. 21ರಂದು ಸುತ್ತೋಲೆ ಹೊರಡಿಸಿ, ಕಡ್ಡಾಯ ಸೇವೆ ಪೂರ್ಣಗೊಳಿಸುವವರೆಗೆ ಪ್ರಮಾಣಪತ್ರ ವಿತರಿಸದಂತೆ, ಮೂಲ ದಾಖಲೆಗಳನ್ನು ಹಿಂದಿರುಗಿಸದಂತೆ ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

ಮೂಲ ದಾಖಲೆಗಳಿಲ್ಲದೆ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್​ಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಅನೇಕ ರಾಜ್ಯಗಳಲ್ಲಿ ಕಡ್ಡಾಯ ಸೇವೆ ಎಂಬುದೇ ಇಲ್ಲ. ಕಡ್ಡಾಯ ಸೇವೆ ಮಾಡುವಂತೆ ಒತ್ತಾಯಿಸುವುದು ಶಿಕ್ಷಣ ಮುಂದುವರೆಸುವ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.