ETV Bharat / state

ಬಿಇ, ಪಾಲಿಟೆಕ್ನಿಕ್ ವ್ಯಾಸಂಗ ಮಾಡುವ ವಿಶೇಷ ವರ್ಗದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ - ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ವ್ಯಾಸಂಗ ಮಾಡುವ ವಿಶೇಷ ವರ್ಗದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ವ್ಯಾಸಂಗ ಮಾಡುವ ವಿಶೇಷ ವರ್ಗದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳಿಂದ ಕ್ರೋಢಿಕರಿಸಿದ ಅರ್ಜಿಗಳು/ದಾಖಲೆಗಳನ್ನು ಸಂಸ್ಥೆಯವರು ಆಯುಕ್ತರ ಕಚೇರಿ, ತಾಂತ್ರಿಕ ಶಿಕ್ಷಣ ಇಲಾಖೆಗೆ ಸಲ್ಲಿಸಲು ಜನವರಿ 31, 2022 ಅಂತಿಮ ದಿನಾಂಕವಾಗಿದೆ.

ಕರ್ನಾಟಕ ಸರ್ಕಾರ
ಕರ್ನಾಟಕ ಸರ್ಕಾರ
author img

By

Published : Dec 6, 2021, 9:16 PM IST

ಬೆಂಗಳೂರು: 2021-22ನೇ ಸಾಲಿನಲ್ಲಿ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಪಾಲನೆ ಅಥವಾ ವಿಶೇಷ ವರ್ಗದ ಮಕ್ಕಳು (ಹೆಚ್.ಐ.ವಿ) ಕುಷ್ಠರೋಗ ಪೀಡಿತ ಪೋಷಕರ ಮಕ್ಕಳಿಗೆ ಪೀಡಿತ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆಯಾಗಿ ರಾಜ್ಯದ ಸರ್ಕಾರಿ/ಅನುದಾನಿತ/ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡದಂತಹ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್ (ಅನುದಾನಿತ ಕೋರ್ಸ್​ಗಳಲ್ಲಿ) ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿಶೇಷ ಪಾಲನೆ ಅಥವಾ ವಿಶೇಷ ವರ್ಗದ ಮಕ್ಕಳು (ಹೆಚ್.ಐ.ವಿ) / ಕುಷ್ಟರೋಗ ಪೀಡಿತರಾದ (ಬದುಕಿರುವ / ಮೃತ ಹೊಂದಿರುವ ಪೋಷಕರ ಮಕ್ಕಳಿಗೆ ಹಾಗೂ ಪೀಡಿತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೀಗಾಗಿ, ಸಂಸ್ಥೆಗಳ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

ಮಾರ್ಗಸೂಚಿಗಳು :

  • ಈ ಸೌಲಭ್ಯವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ಬೇರೆ ಯಾವುದೇ ಯೋಜನೆ ಸೌಲಭ್ಯ ಪಡೆದಿರುವುದಿಲ್ಲವೆಂದು ಪ್ರಾಂಶುಪಾಲರು ಖಚಿತ ಪಡಿಸಿಕೊಳ್ಳಬೇಕು.
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆಯಾಗಿ ರಾಜ್ಯದ ಸರ್ಕಾರಿ/ಅನುದಾನಿತ/ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡದಂತಂಹ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರು.
  • ಸರ್ಕಾರಿ/ಅನುದಾನಿತ ಪಾಲಿಟೆಕ್ನಿಕ್ (ಅನುದಾನಿತ ಕೋರ್ಸ್​ಗಳ) ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.
  • ಕಾಮೆಡ್-ಕೆ/ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆದಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
  • ವಿದ್ಯಾರ್ಥಿಯು ಶೈಕ್ಷಣಿಕ ವರ್ಷಕ್ಕೆ ಅರ್ಹತೆ ಬಗ್ಗೆ ಪರಿಶೀಲಿಸಿ, ಅರ್ಜಿಯನ್ನು ಸಲ್ಲಿಸಬೇಕು.
  • ವಿದ್ಯಾರ್ಥಿಯ ಆಧಾರ್ ಕಾರ್ಡ್ (Aadhaar Card) ಮತ್ತು ಕುಟುಂಬದ ಪಡಿತರ ಚೀಟಿಯ (Family's Ration Card) ನಕಲು ಪ್ರತಿಗಳನ್ನು ಸಲ್ಲಿಸಬೇಕು.
  • ವಿದ್ಯಾರ್ಥಿಗಳ ಅರ್ಹತೆ ಮತ್ತು ಅವರ ತಂದೆ/ತಾಯಿಯ ಅಥವಾ ವಿದ್ಯಾರ್ಥಿಯ ಆರೋಗ್ಯ ಸ್ಥಿತಿಯನ್ನು ದೃಢೀಕರಿಸುವ ಅಧಿಕಾರವನ್ನು ಜಿಲ್ಲಾ ಆರೋಗ್ಯ ಪ್ರಾಧಿಕಾರಗಳಿಂದ (District Surgeon) ದೃಢೀಕೃತ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು.
  • ಪ್ರಾಂಶುಪಾಲರು ವಿದ್ಯಾರ್ಥಿಗಳ ಕೋರ್ಸುವಾರು ಮತ್ತು ಲಿಂಗವಾರು ದಾಖಲೆಗಳನ್ನು ಪ್ರತಿ ವರ್ಷ ಪಡೆದು ಸಲ್ಲಿಸುವುದು ಹಾಗೂ ಸಂಸ್ಥೆಯಲ್ಲಿ ಡೇಟಾ ದಾಖಲಿಸಬೇಕು.
  • ಫಲಾನುಭವಿಗಳಿಗೆ/ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಅವರು ಹೊಂದಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಬೇಕೆಂದು ಸರ್ಕಾರ ಆದೇಶಿಸಿರುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಹೊಂದಿರುವ ರಾಷ್ಟ್ರೀಕೃತ ಬ್ಯಾಂಕ್ (Nationalized Bank) ಖಾತೆಗಳ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ಮತ್ತು ಬ್ಯಾಂಕ್‌ನಲ್ಲಿ ವ್ಯವಹಾರ ನಡೆಸಿರುವ ಬಗ್ಗೆ (Statement) ಸಲ್ಲಿಸುವುದು, ಈ ವಿವರವನ್ನು ಮ್ಯಾನಡೇಟ್ ಪಾರ್ಮ್ (Mandate Form)ನಲ್ಲಿ ತುಂಬಿ ನೀಡಬೇಕು.
  • ಅರ್ಜಿಗಳಲ್ಲಿ ನೀಡಬೇಕಾದ ಪ್ರತಿಯೊಂದು ಮಾಹಿತಿಯನ್ನು ಪೂರ್ಣವಾಗಿ ವಿದ್ಯಾರ್ಥಿಯು ನಮೂದಿಸಿರುವ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿರುವ ಬಗ್ಗೆ ಖಚಿತ ಪಡಿಸಿಕೊಂಡು ಪ್ರಾಂಶುಪಾಲರು ಶಿಫಾರಸ್ಸಿನೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.
  • ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಂಸ್ಥೆಗೆ ಸಲ್ಲಿಸಲು ಅಂತಿಮ ದಿನಾಂಕ- ಜನವರಿ 15, 2022.
  • ವಿದ್ಯಾರ್ಥಿಗಳಿಂದ ಕ್ರೋಢಿಕರಿಸಿದ ಅರ್ಜಿಗಳು/ದಾಖಲೆಗಳನ್ನು ಸಂಸ್ಥೆಯವರು ಆಯುಕ್ತರ ಕಚೇರಿ, ತಾಂತ್ರಿಕ ಶಿಕ್ಷಣ ಇಲಾಖೆಗೆ ಸಲ್ಲಿಸಲು ಅಂತಿಮ ದಿನಾಂಕ ಜನವರಿ 31, 2022.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.