ಬೆಂಗಳೂರು: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಸುಪ್ರೀಂ ಅಂಗಳದಲ್ಲಿದ್ದು, ಉಪಚುನಾವಣೆಗೆ ಅವಕಾಶ ನೀಡದಂತೆ ತಡೆ ಕೋರಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಅನರ್ಹ ಶಾಸಕ ಎಸ್.ಟಿ.ಸೋಮಶೇಖರ ಹೇಳಿದರು.
ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನಲೆ ಸಿಎಂ ಜೊತೆ, ಅನರ್ಹ ಶಾಸಕರು ಸಭೆ ನಡೆಸಿದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮದವರೊಂದಿಗೆ ಮಾತನಾಡಿದರು.
ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ವಿಚಾರಣೆ ನಡೆಯುತ್ತಿದೆ. ಈ ಸಂಬಂಧ ಯಾವುದೇ ಆದೇಶ ಹೊರಬಂದಿಲ್ಲ. ಹೀಗಾಗಿ ಸದ್ಯಕ್ಕೆ ಚುನಾವಣೆಗೆ ತಡೆ ನೀಡಬೇಕು ಎಂದು ಮನವಿ ಮಾಡಲಿದ್ದೇವೆ ಎಂದರು.
ಸಿಎಂ ಬಿಎಸ್ವೈ ಸೂಚನೆ ಮೇರೆಗೆ ದೆಹಲಿಗೆ ತೆರಳಲು ಅನರ್ಹ ಶಾಸಕರು ತೀರ್ಮಾನಿಸಿದ್ದು, ಬೆಳಗ್ಗೆ ಹನ್ನೊಂದು ಗಂಟೆಗೆ ವಕೀಲ ಮುಕುಲ್ ರೋಹ್ಟಗಿಯವರನ್ನು ಭೇಟಿಯಾಗುವುದಾಗಿ ಮಾಹಿತಿ ಕೊಟ್ಟರು.