ETV Bharat / state

ಕರ್ನಾಟಕದಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ಅಂಚೆ ಇಲಾಖೆ

ಅಭ್ಯರ್ಥಿಗಳು ತಮ್ಮ ಹೆಸರನ್ನು ಅಂತರ್ಜಾಲದ ಮೂಲಕ ನೋಂದಾಯಿಸಬಹುದಾಗಿದ್ದು, ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್‌ನಲ್ಲಿ ಸಲ್ಲಿಸಬೇಕಾಗುತ್ತದೆ.

Postal Department of India
ಭಾರತೀಯ ಅಂಚೆ ಇಲಾಖೆ
author img

By

Published : Jan 9, 2021, 12:02 PM IST

ಬೆಂಗಳೂರು : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,443 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳ ಪೈಕಿ 15 ಹುದ್ದೆಗಳು ಬೆ೦ಗಳೂರು ಜಿ.ಪಿ.ಒ ಗೆ ಸೇರಿರುತ್ತವೆ. ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಮತ್ತು ವಯೋಮಿತಿ, ಕನಿಷ್ಠ 18 ರಿಂದ ಗರಿಷ್ಠ 40 ವರ್ಷಗಳಾಗಿದ್ದು. ಅನುಸೂಚಿತ ಜಾತಿ/ಬುಡಕಟ್ಟು/ಹಿ೦ದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ ಎಂದು ಅಂಚೆ ಇಲಾಖೆ ತಿಳಿಸಿದೆ.

ಅಭ್ಯರ್ಥಿಗಳು ತಮ್ಮ ಹೆಸರನ್ನು ಅಂತರ್ಜಾಲದ ಮೂಲಕ ನೋಂದಾಯಿಸಬಹುದಾಗಿದ್ದು, ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಚೇರಿಯಲ್ಲಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನ ಹೋಮ್‌ಪೇಜ್‌ನಲ್ಲಿ ಲಭ್ಯವಿರುವ ಯುಆರ್‌ಎಲ್‌ ನ ಮೂಲಕ ಶುಲ್ಕವನ್ನು ಕಟ್ಟಬಹುದಾಗಿದೆ.

ಓದಿ : 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಆಕಾಶವಾಣಿ ನಲಿ-ಕಲಿ ಕಾರ್ಯಕ್ರಮ ಜ.11 ರಿಂದ

ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ ಮತ್ತು ಅನುಸೂಚಿತ ಜಾತಿ/ಬುಡಕಟ್ಟು ಅಭ್ಯರ್ಥಿಗಳು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಲ್ಲ ಅಭ್ಯರ್ಥಿಗಳು/ಅರ್ಜಿದಾರರು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳು ವೆಬ್‌ಸೈಟ್‌ ನಲ್ಲಿ ಲಭ್ಯವಿರುತ್ತವೆ ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ದಿನಾಂಕ 20-01-2021ರ ಒಳಗೆ ಸಲ್ಲಿಸಬೇಕಾಗಿರುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.