ETV Bharat / state

ಬಿಎಂಟಿಸಿಯಲ್ಲಿ 630 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - ಶಿಶಿಕ್ಷು ಕಾಯ್ದೆ 1961 ಅಡಿ

ಬಿಎಂಟಿಸಿಯಲ್ಲಿ 630 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ, ಐಟಿಐ ಮತ್ತು ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

author img

By

Published : Feb 25, 2023, 3:26 PM IST

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶಿಶಿಕ್ಷು (ಅಪ್ರೆಂಟಿಸ್​) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಹಾಗೂ ಡಿಪ್ಲೊಮಾ ಆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶಿಶಿಕ್ಷು ಕಾಯ್ದೆ 1961 ಅಡಿಯಲ್ಲಿ ಒಟ್ಟು 636 ಹುದ್ದೆಗಳ ಭರ್ತಿಗೆ ಕ್ರಮಕ್ಕೆ ಮುಂದಾಗಲಾಗಿದ್ದು, ಈ ಹುದ್ದೆಗಳ ತರಬೇತಿ ಅವಧಿ ಒಂದರಿಂದ ಎರಡು ವರ್ಷದವರೆಗೆ ಇದೆ. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ತರಬೇತಿ ಭತ್ಯೆಯನ್ನು ನೀಡಲಾಗುವುದು. ಅಭ್ಯರ್ಥಿಗಳನ್ನು ಮೀಸಲಾತಿ ಹಾಗೂ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಬಿಎಂಟಿಸಿಯಲ್ಲಿಯಲ್ಲಿ ಖಾಲಿ ಇರುವ ಮೆಕ್ಯಾನಿಕ್​ ಡೀಸೆಲ್​, ಫಿಟ್ಟರ್​, ವೆಲ್ಡರ್​, ಮೋಟರ್​ ವೆಹಿಕಲ್​ ಬಾಡಿ ಬಿಲ್ಡರ್​​, ಎಲ್ಎಕ್ಟ್ರೀಷಿಯನ್​, ಎಲೆಕ್ಟ್ರಾನಿಕ್ಸ್​ ಮೆಕ್ಯಾನಿಕ್​, ಕಂಪ್ಯೂಟರ್​ ಆಪರೇಟರ್​ ಕಂ ಪ್ರೋಗ್ರಾಮಿಂಗ್​ ಅಸಿಸ್ಟೆಂಟ್​ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು: ಮಾನ್ಯತೆ ಪಡೆದ ಸಂಸ್ಥೆಗಳಿಂದ ಎಸ್​ಎಸ್​ಎಲ್​ಸಿ, ಐಟಿಐ, ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ದಿನಾಂಕ: ಈ ಹುದ್ದೆಗೆ ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 15 ಆಗಿದೆ.

ತರಬೇತಿ ಭತ್ಯೆ: ಅಭ್ಯರ್ಥಿಗಳ ವಿದ್ಯಾರ್ಹತೆಗೆ ಅನುಗುಣವಾಗಿ ಭತ್ಯೆ ನಿಗದಿಯಾಗಿದೆ. ಹುದ್ದೆ ಅನುಸಾರವಾಗಿ ಮಾಸಿಕ 6000 ರೂ ನಿಂದ 9000 ರೂವರೆಗೆ ಭತ್ಯೆ ನೀಡಲಾಗುವುದು.

ವಯೋಮಿತಿ: ಈ ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 16 ವರ್ಷ ತುಂಬಿದ್ದು, ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ: ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶೈಕ್ಷಣಿಕ ದಾಖಲಾತಿ, ಎರಡು ಪಾಸ್​ಪೋರ್ಟ್​ ಸೈಜ್​ ಫೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ಆಯ್ಕೆ: ಈ ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಸಂಪೂರ್ಣವಾಗಿ ಮೆರಿಟ್​ ಮತ್ತು ಮೀಸಲಾತಿ ಅನುಸಾರವಾಗಿ ಈ ಹುದ್ದೆ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಳಾಸ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್​ ಬಿಲ್ಡಿಂಗ್​, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್​ ನಿಲ್ದಾಣ ಪಕ್ಕ, ಬೆಂಗಳೂರು 560027. ಈ ವಿಳಾಸಕ್ಕೆ ನಿಗದಿತ ದಿನಕ್ಕೆ ಮೊದಲು ತಲುಪುವಂತೆ ಅರ್ಜಿಯನ್ನು ಸಲ್ಲಿಸಬೇಕಿದೆ.

ಈ ಸಂಬಂಧ ಬಿಎಂಟಿಸಿ ಹೊರಡಿಸಿದ ಅಧಿಕೃತ ಅಧಿಸೂಚನೆ ಮತ್ತು ಹುದ್ದೆ ಕುರಿತಾದ ಸಂಪೂರ್ಣ ವಿವರಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು mybmtc.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.