ETV Bharat / state

ಚೊಚ್ಚಲ ಕೃತಿಗೆ ಧನಸಹಾಯ ನೀಡಲು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅರ್ಜಿ ಆಹ್ವಾನ - ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಅರ್ಜಿ ಆಹ್ವಾನ

ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15 ಸಾವಿರ ರೂ.ಗಳ ಪ್ರೋತ್ಸಾಹಧನ ಸಿಗಲಿದ್ದು, ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾಗಿ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು ಎಂದು ಪ್ರಾಧಿಕಾರದಿಂದ ತಿಳಿಸಲಾಗಿದೆ.

ಚೊಚ್ಚಲ ಕೃತಿಗೆ ಧನಸಹಾಯ ನೀಡಲು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

author img

By

Published : Jan 18, 2022, 3:25 AM IST

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15 ಸಾವಿರ ರೂ.ಗಳ ಪ್ರೋತ್ಸಾಹಧನ ಸಿಗಲಿದ್ದು, ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾಗಿ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಸಲ್ಲಿಸಲ್ಪಡುತ್ತಿರುವ ಕೃತಿಯು ಚೊಚ್ಚಲ ಕೃತಿಯಾಗಿರಬೇಕು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು ಎಂದು ಪ್ರಾಧಿಕಾರ ಹೇಳಿದೆ.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು.

ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು ಮತ್ತು ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ಫೆಬ್ರವರಿ 15 ರಂದು ಕೊನೆಯ ದಿನವಾಗಿದೆ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560 002 ರಿಗೆ ಕಳುಹಿಸಿಕೊಡಲು ಪ್ರಕಟಣೆಯಲ್ಲಿ ಕೋರಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.