ETV Bharat / state

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಆಡಳಿತಾಧಿಕಾರಿ ಆಗಿ ನೇಮಕಗೊಳಿಸಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ - ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಹಾಗೂ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಅರ್ಜಿಯಲ್ಲಿ ಪ್ರಶ್ನೆ.

high court
ಹೈಕೋರ್ಟ್​
author img

By

Published : Jan 18, 2023, 10:36 PM IST

ಬೆಂಗಳೂರು : ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧೀಶರು ಪ್ರಸ್ತುತ ವಿಚಾರಣಾಧೀನ ಕೈದಿಯಾಗಿದ್ದು ಜೈಲಿಗೆ ಹೋಗುವ ಮುನ್ನ ಮಠಕ್ಕೆ ಉಸ್ತುವಾರಿ ಸ್ವಾಮೀಜಿ ಅವರನ್ನು ನೇಮಕ ಮಾಡಲು ಯಾವ ಅಧಿಕಾರ ಹೊಂದಿದ್ದರು ಮತ್ತು ಈ ದಿಸೆಯಲ್ಲಿ ಏನಾದರೂ ಲಿಖಿತ ನಿಯಮಗಳಿವೆಯೇ ಎಂದು ಮಠದ ಪರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿದೆ.

ವಿಚಾರಣೆ ಮುಂದೂಡಿದ ನ್ಯಾಯಪೀಠ: ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ಆಡಳಿತಾಧಿಕಾರಿ ಆಗಿ ನೇಮಕ ಮಾಡಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು ಮತ್ತು ಭಕ್ತರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆಯನ್ನೂ ಜನವರಿ 23ಕ್ಕೆ ಮುಂದೂಡಿತು.

ಉಸ್ತುವಾರಿ ಸ್ವಾಮೀಜಿ ಶಾಖಾ ಮಠದ ಮಠಾಧಿಪತಿ:ವಿಚಾರಣೆ ವೇಳೆ ಮಠದ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ ಅವರು, ಮಠಕ್ಕೆ ಉಸ್ತುವಾರಿ ಸ್ವಾಮೀಜಿ ನೇಮಕ ಮಾಡುವುದು ಪೀಠಾಧಿಪತಿಗೆ ಇರುವ ಅಂತರ್ಗತ ಅಧಿಕಾರದ ಕುರಿತಾಗಿ ಸ್ಪಷ್ಟನೆ ನೀಡಿದರು. ಅಲ್ಲದೇ, ಈಗಾಗಲೇ ಮುರುಘಾ ಶರಣರು ಜೈಲಿನಲ್ಲಿ ಇದ್ದರೂ ಅವರಿಂದ ನೇಮಕಗೊಂಡಿರುವ ಮಠದ ಉಸ್ತುವಾರಿ ಸ್ವಾಮೀಜಿ ಶಾಖಾ ಮಠದ ಮಠಾಧಿಪತಿಯೇ ಆಗಿದ್ದು, ಶರಣರಿಂದ ತಮ್ಮ ಹೆಸರಿಗೆ ಜಿಪಿಎ ಪಡೆದಿದ್ದಾರೆ.

ಮಠದ ಆಂತರಿಕ ಆಡಳಿತ:ಕಾನೂನು ಪ್ರಕಾರ ಇಂತಹ ಪತ್ರವನ್ನು ಜೈಲಿನಲ್ಲಿರುವ ವಿಚಾರಣಾಧೀನ ಬಂಧಿಯೂ ಕೊಡುವ ಅಧಿಕಾರ ಇದೆ. ಇದರಿಂದ ಮಠ ಮತ್ತು ಅದರ ಆಸ್ತಿಗಳ ನಿರ್ವಹಣೆಗೆ ಯಾವುದೇ ಅನಾನುಕೂಲ ಆಗುವುದಿಲ್ಲ. ಹಾಗಾಗಿ, ಹೊರಗಿನಿಂದ ಬಂದ ಆಡಳಿತಾಧಿಕಾರಿಯು ಮಠದ ಆಂತರಿಕ ಆಡಳಿತ ನಡೆಸುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಮಾಹಿತಿ ನೀಡಿದರು.

ಸರ್ಕಾರದ ಆದೇಶವನ್ನು ರದ್ದುಗೊಳಿಸಲು ಮನವಿ:ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಸಂವಿಧಾನದದ ಪ್ರಕಾರ ಯಾವುದಾದರೂ ನಿರ್ಬಂಧ ವಿಧಿಸಬೇಕಾಗಿದ್ದಲ್ಲಿ ಶಾಸಕಾಂಗ ರಚಿಸಿದ ಕಾನೂನಿನ ಅನ್ವಯದಿಂದ ಮಾತ್ರ ಸಾಧ್ಯ. ಈ ಪ್ರಕರಣದಲ್ಲಿ ಆಡಳಿತಾಧಿಕಾರಿ ನಿಯಮಿಸಿದ ಕಾರ್ಯಾಂಗದ ಕ್ರಮ ಸಂವಿಧಾನದಲ್ಲಿ ಕೊಡಮಾಡಿದ ಮೂಲಭೂತ ಹಕ್ಕುಗಳನ್ನು ವಿವರಿಸುವ 26ನೇ ವಿಧಿಗೆ ಸಂಪೂರ್ಣ ವಿರುದ್ಧವಾಗಿದೆ. ಆದ್ದರಿಂದ, ಆಡಳಿತಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದರು.

ವೀರಶೈವ ಲಿಂಗಾಯತ ಎರಡು ಒಂದೇ: ವಿಚಾರಣೆ ವೇಳೆಯಲ್ಲಿ ವೀರಶೈವ ಮತ್ತು ಲಿಂಗಾಯತ ಪದಗಳ ಕುರಿತು ಪ್ರಸ್ತಾಪವಾಗಿದ್ದು, ಆಡಳಿತಾಧಿಕಾರಿ ಪಿ.ಎಸ್.ವಸ್ತ್ರದ ಪರ ಹಾಜರಾಗಿದ್ದ ಹಿರಿಯ ವಕೀಲ ಗಂಗಾಧರ ಗುರುಮಠ ಅವರು, ’ಎರಡೂ ಪದಗಳು ಒಂದೇ’ ಎಂದು ಪ್ರತಿಪಾದಿಸಿದರೆ ಜಯಕುಮಾರ್ ಪಾಟೀಲ, ‘ಈ ವಿಷಯದಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿವೆ. ಅದನ್ನು ಈ ಪ್ರಕರಣದಲ್ಲಿ ಚರ್ಚಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ವಸ್ತ್ರದ ಆಡಳಿತಾಧಿಕಾರಿ ನೇಮಕದ ಪ್ರಶ್ನೆ::ಶಿವಮೂರ್ತಿ ಮುರುಘಾ ಶರಣರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾರಣ, ರಾಜ್ಯ ಸರ್ಕಾರ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.
ಇದನ್ನೂಓದಿ:ಚುನಾವಣಾ ಬಾಂಡ್​ ಮೂಲಕ ಬಿಜೆಪಿಗೆ ಹರಿದು ಬಂತು 1033 ಕೋಟಿ ರೂ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.