ETV Bharat / state

ಕರ್ನಾಟಕ ವಿಧಾನಮಂಡಲ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರ ನೇಮಕ

ಪ್ರತಿ ಸ್ಥಾಯಿ ಸಮಿತಿಯಲ್ಲಿ ಹದಿನೈದು ಮಂದಿ ಶಾಸಕರು ಹಾಗೂ ಐದು ಮಂದಿ ವಿಧಾನಪರಿಷತ್ ಸದಸ್ಯರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Appointment_Standing_Committees
ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕ
author img

By

Published : Nov 10, 2020, 11:17 PM IST

ಬೆಂಗಳೂರು: ಕರ್ನಾಟಕ ವಿಧಾನಮಂಡಲದ / ವಿಧಾನಸಭೆಯ 9 ವಿವಿಧ ಸ್ಥಾಯಿ ಸಮಿತಿಗಳಿಗೆ 2020-21ನೇ ಸಾಲಿನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಲೆಕ್ಕಪತ್ರಗಳ ಸ್ಥಾಯಿ ಸಮಿತಿಗೆ ಶಾಸಕ ರಾಮಲಿಂಗಾರೆಡ್ಡಿ, ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅರವಿಂದ ಲಿಂಬಾವಳಿ, ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಗೆ ಅಂಗಾರ ಎಸ್., ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ದಿನಕರ್ ಕೇಶವ ಶೆಟ್ಟಿ, ಅಧೀನ ಶಾಸನ ರಚನಾ ಸಮಿತಿಗೆ ಎಸ್. ಕುಮಾರ್ ಬಂಗಾರಪ್ಪ, ಸಭೆಯ ಮುಂದಿಡಲಾದ ಕಾಗದಪತ್ರಗಳ ಸಮಿತಿಗೆ ಸಾ.ರಾ. ಮಹೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಕೆ. ಪೂರ್ಣಿಮಾ, ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಗೆ ಜಿ. ಸೋಮಶೇಖರ್ ರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಗ್ರಂಥಾಲಯ ಸಮಿತಿಯಲ್ಲಿ ವಿಧಾನಸಭೆ ಸಭಾಧ್ಯಕ್ಷರು ಹಾಗೂ ವಿಧಾನಪರಿಷತ್‌ನ ಸಭಾಪತಿಗಳು ಸದಸ್ಯರಾಗಿರುವುದರಿಂದ ನಿಯಮಗಳ ಪ್ರಕಾರ ಗ್ರಂಥಾಲಯ ಸಮಿತಿಗೆ ವಿಧಾನಪರಿಷತ್ ಸಭಾಪತಿಗಳನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪ್ರತಿ ಸ್ಥಾಯಿ ಸಮಿತಿಯಲ್ಲಿ ಹದಿನೈದು ಮಂದಿ ಶಾಸಕರು ಹಾಗೂ ಐದು ಮಂದಿ ವಿಧಾನಪರಿಷತ್ ಸದಸ್ಯರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ವಿಧಾನಸಭೆಯ ವಿವಿಧ ಸಮಿತಿಗಳು:

ಇನ್ನು ವಿಧಾನಸಭೆಯ ಸಮಿತಿಗಳ ಪೈಕಿ ಅಂದಾಜುಗಳ ಸಮಿತಿಗೆ ಅಭಯ ಪಾಟೀಲ್, ಸರ್ಕಾರಿ ಭರವಸೆಗಳ ಸಮಿತಿಗೆ ಕೆ. ರಘುಪತಿ ಭಟ್, ಹಕ್ಕು ಬಾಧ್ಯತೆಗಳ ಸಮಿತಿಗೆ ಬಸನಗೌಡ ಆರ್. ಪಾಟೀಲ್ (ಯತ್ನಾಳ್), ಖಾಸಗಿ ಸದಸ್ಯರುಗಳ ವಿಧೇಯಕ, ನಿರ್ಣಯಗಳ ಸಮಿತಿ, ಅರ್ಜಿಗಳ ಸಮಿತಿ ಹಾಗೂ ವಸತಿ ಸೌಕರ್ಯ ಸಮಿತಿಗಳಿಗೆ ಅಧ್ಯಕ್ಷರಾಗಿ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ್ ಮಾಮನಿ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಧಾನಸಭೆ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.