ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ನಾಲ್ವರನ್ನು ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಇಂದು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಸಮಾರಂಭವನ್ನು ನಡೆಸಲಾಯ್ತು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಹಾಗೂ ಸಿಎಂ ಯಡಿಯೂರಪ್ಪ ಸೇರಿದಂತೆ ಇತರೆ ನ್ಯಾಯಾಮೂರ್ತಿಗಳು ಭಾಗಿಯಾಗಿದ್ರು. ಸುಪ್ರೀಂಕೋರ್ಟ್ ಕೊಲಿಜಿಯಂ ಕಳುಹಿಸಿದ್ದ ಶಿಫಾರಸು ಅಂಗೀಕರಿಸಿ, ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಷ್ ಚಂದ್ರಕಿಣಗಿ, ಸೂರಜ್ ಗೋವಿಂದರಾಜ್ ಮತ್ತು ಸಚಿನ್ ಶಂಕರ್ ಮಗದಂ ಅವರನ್ನು ಎರಡು ವರ್ಷಗಳ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.
ಸದ್ಯ ಕರ್ನಾಟಕ ಹೈಕೋರ್ಟ್‌ನಲ್ಲಿ ಹಾಲಿ 31 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ವರ ನೇಮಕಾತಿಯಿಂದ ನ್ಯಾಯಮೂರ್ತಿಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.