ETV Bharat / state

ಕುರುಬರ ಎಸ್​ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ - ಕುರುಬ ಎಸ್​ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ

ಕುರುಬರನ್ನು ಎಸ್​ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸುವ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

appointment of members for Kuruba ST Fighting Committee
ಕುರುಬ ಎಸ್​ಟಿ ಹೋರಾಟ ಸಮಿತಿಗೆ ಪದಾಧಿಕಾರಿಗಳ ನೇಮಕ
author img

By

Published : Sep 29, 2020, 3:45 PM IST

ಬೆಂಗಳೂರು: ಇತ್ತೀಚಿಗೆ ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಿದಂತೆ ಕುರುಬರನ್ನು ಎಸ್​ಟಿ ವರ್ಗಕ್ಕೆ ಸೇರಿಸಲು ಒತ್ತಾಯಿಸುವ ಹೋರಾಟ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

ಸಮಿತಿಗೆ ಮಹಾ ಮಾರ್ಗದರ್ಶಕರಾಗಿ ಕಾಗಿನೆಲೆ ಸಂಸ್ಥಾನದ ನಿರಂಜನಾನಂದಪುರಿ ಶ್ರೀ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಶ್ರೀ, ತಿಂಥಿಣೀ ಕ್ಷೇತ್ರದ ಸಿದ್ದರಾಮಾನಂದಪುರಿ ಶ್ರೀ ಹಾಗೂ ಮೈಸೂರಿನ ಶಿವಾನಂದಪುರಿ ಶ್ರೀ ಇರಲಿದ್ದಾರೆ.

appointment of members for Kuruba ST Fighting Committee
ಕುರುಬ ಎಸ್​ಟಿ ಹೋರಾಟ ಸಮಿತಿ ಪದಾಧಿಕಾರಿಗಳ ನೇಮಕ

ಹೋರಾಟ ಸಮಿತಿಯ ಗೌರವಾಧ್ಯಕ್ಷರಾಗಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಮುಖಂಡ ಹೆಚ್.ಎಂ.ರೇವಣ್ಣ, ಎಂಎಲ್​ಸಿ ಹೆಚ್.ವಿಶ್ವನಾಥ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಅವರ​ನ್ನು ನೇಮಕ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಕೆ.ವಿರೂಪಾಕ್ಷಪ್ಪ ಅವರನ್ನು ನೇಮಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನ ಮಠ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.