ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಮೂವರು ಕಾರ್ಯಾಧ್ಯಕ್ಷರಿದ್ದು, ಇದೀಗ ಮತ್ತಿಬ್ಬರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಒಟ್ಟಿನಲ್ಲಿ ಕೆಪಿಸಿಸಿ ಓರ್ವ ಅಧ್ಯಕ್ಷರು ಹಾಗೂ ಐವರು ಕಾರ್ಯಾಧ್ಯಕ್ಷರನ್ನು ಹೊಂದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ, ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಮಹಮದ್ರನ್ನ ನೇಮಿಸಿ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದರು.
ಓದಿ:ಸಿದ್ದರಾಮಯ್ಯ, ಡಿಕೆಶಿ ಉದ್ಯೋಗಕ್ಕಾಗಿ ಅಲೆಯುತ್ತಿದ್ದಾರೆ: ಸಚಿವ ಆರ್.ಅಶೋಕ್
ಇದೀಗ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣರನ್ನ ಕಾರ್ಯಾಧ್ಯಕ್ಷರನ್ನಾಗಿ ಹೊಸದಾಗಿ ನೇಮಿಸಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಇನ್ನಿಬ್ಬರನ್ನು ನೇಮಿಸುವ ಮೂಲಕ ಪಕ್ಷದ ಹೈಕಮಾಂಡ್ ಸಂಘಟನೆಗೆ ಇನ್ನಷ್ಟು ಒತ್ತು ನೀಡಿದೆ ಎನ್ನಲಾಗ್ತಿದೆ.