ETV Bharat / state

ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ: ಬಿಬಿಎಂಪಿ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ - Special Commissioner Preeti Gehlot

ಬೆಂಗಳೂರು ನಗರವನ್ನು ಹಸಿರುಮಯ ನಗರವನ್ನಾಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಹಾಗೂ ಹಸಿರು ಬೆಂಗಳೂರಿನ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

appropriate-action-to-will-be-taken-for-green-bengaluru-special-commissioner-preeti-gehlot
ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ: ಪಾಲಿಕೆ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್
author img

By

Published : Aug 9, 2023, 7:38 PM IST

ಬೆಂಗಳೂರು : ಬೆಂಗಳೂರು ನಗರವನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಹಾಗೂ ಹಸಿರು ಬೆಂಗಳೂರಿನ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹಸಿರು/ಪರಿಸರ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಆರ್ ವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು ನಡೆದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರವನ್ನು ಹಸಿರು ಬೆಂಗಳೂರನ್ನಾಗಿಸುವ ಉದ್ದೇಶದಿಂದ ಬ್ರ್ಯಾಂಡ್ ಬೆಂಗಳೂರಿನಲ್ಲಿ 7 ವಿವಿಧ ವಿಷಯಗಳಡಿ ಬರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಅದರಂತೆ ಮುಂದಿನ 25-30 ವರ್ಷಗಳಲ್ಲಿ ಸಂಪೂರ್ಣ ಬೆಂಗಳೂರನ್ನು ಹಸಿರುಮಯವಾಗಿಸಬೇಕು. ಈ ಸಂಬಂಧ ನಾಗರಿಕರಿಂದ ಬಂದಂತಹ ಸಲಹೆಗಳನ್ನೆಲ್ಲಾ ಅಧ್ಯಯನ ನಡೆಸಿ ಕ್ರೋಢೀಕರಿಸಿ ಉತ್ತಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಈಗಾಗಲೇ ಶಾಲಾ-ಕಾಲೇಜು ಶೈಕ್ಷಣಿಕ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಂಡು, ಸಸಿಗಳನ್ನು ನೆಟ್ಟು ಅವು ಬೆಳೆಯುವವರೆಗೆ ಪೋಷಣೆ ಮಾಡಲು ವಿದ್ಯಾರ್ಥಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಆ ಸಸಿಗೆ ವಿದ್ಯಾರ್ಥಿಗಳ ಹೆಸರನ್ನು ಶಾಶ್ವತವಾಗಿ ಇಡುವ ಯೋಜನೆ ರೂಪಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿ ಕೆಲಸ ಮಾಡಲಾಗುತ್ತಿದೆ ಎಂದರು.

ವಿಚಾರ ಸಂಕಿರಣದಲ್ಲಿ ಬಂದಂತಹ ಸಲಹೆಗಳು:

  • ನಗರದ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಸಸಿಗಳನ್ನು ನೆಡುವುದು.
  • ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ವಹಿಸುವುದು.
  • ಶೇ. 100 ರಷ್ಟು ತ್ಯಾಜ್ಯ ನೀರು ಶುದ್ಧೀಕರಣ ಹಾಗೂ ಶುದ್ಧೀಕರಣ ಘಟಕಗಳನ್ನು ವಿಕೇಂದ್ರಿಕರಿಸುವುದು.
  • ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವುದು.
  • ಅಪಾರ್ಟ್ಮೆಂಟ್​​ಗಳಿಗೆ ಕಡ್ಡಾಯವಾಗಿ ಎಸ್‌.ಟಿ.ಪಿಗಳ ನಿರ್ಮಾಣ ಮಾಡುವುದು.
  • ಆರ್ಕಿಟೆಕ್ಟ್​ಗಳು ಮರ/ಸಸಿಗಳನ್ನು ಕಡಿಯದೆ ಅವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಸಸಿಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿನ್ಯಾಸ ರೂಪಿಸಬೇಕು.
  • ನಗರದಲ್ಲಿ ನೆಡುವಂತಹ ಸಸಿಗಳು ಉಳಿದಿವೆಯೇ ಅಥವಾ ನಾಶವಾಗಿವೆಯೇ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನಿಟ್ಟುಕೊಳ್ಳಬೇಕು.
  • ನಗರದಲ್ಲಿರುವ ಎಲ್ಲಾ ಕೆರೆಗಳ ಪುನಶ್ಚೇತನ ಹಾಗೂ ನಿರ್ವಹಣೆ ಮಾಡುವುದು.
  • ಅಂತರ್ಜಲ ಪುನಶ್ಚೇತನ ಮಾಡುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸಬೇಕು.
  • ಪರಿಸರವನ್ನು ಉಳಿಸುವ ಬಗ್ಗೆ ನಾವೆಲ್ಲರೂ ಮಕ್ಕಳಿಗೆ ಮನೆಯಿಂದಲೇ ಶಿಕ್ಷಣ ನೀಡಿ ಸಸಿಗಳನ್ನು ಪೋಷಿಸಿ ಬೆಳೆಸುವ ಕುರಿತು ಜಾಗೃತಿ ಮೂಡಿಸಬೇಕು.
  • ಬಿಬಿಎಂಪಿ, ಜಲಮಂಡಳಿ, ಬಿಡಿಎ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಪರಿಸರವನ್ನು ವೃದ್ಧಿಸಬೇಕು.
  • ನಗರದಲ್ಲಿ ವಾಹನಗಳಿಂದ ಸಾಕಷ್ಟು ವಾಯುಮಾಲಿನ್ಯವಾಗಲಿದ್ದು, ಹೊಸ ವಾಹನಗಳನ್ನು ಕೊಳ್ಳುವ ಸಮಯದಲ್ಲಿ ಸಸಿಗಳನ್ನು ಉಡುಗೊರೆಯಾಗಿ ನೀಡಿ ಅವುಗಳನ್ನು ಪೋಷಿಸಿ ಬೆಳೆಸಲು ಜಾಗೃತಿ ಮೂಡಿಸುವುದು.
  • ಅಭಿವೃದ್ಧಿಯಾಗದಂತಹ ಉದ್ಯಾನವನಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸುವ ಯೋಜನೆ ರೂಪಿಸುವುದು‌.
  • ನಗರದ ರಸ್ತೆ ಬದಿ, ಉದ್ಯಾನ, ಮನೆಗಳ ಬಳಿ ಇಂಗು ಗುಂಡಿಗಳನ್ನು ನಿರ್ಮಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು.

ಈ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್, ಕೆರೆಗಳ ವಿಭಾಗದ ಮುಖ್ಯ ಅಭಿಯಂತರ ವಿಜಯ್ ಕುಮಾರ್ ಹರಿದಾಸ್, ಆರ್ ವಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಕೆ ಎನ್ ಸುಬ್ರಮಣ್ಯ, ಪಾಲಿಕೆಯ ಅರಣ್ಯ, ತೋಟಗಾರಿಕೆ ವಿಭಾಗದ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ದಾವಣಗೆರೆ: ನೆಚ್ಚಿನ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.