ETV Bharat / state

200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಿದ್ಧತೆ: ಆರಗ ಜ್ಞಾನೇಂದ್ರ - Police Commemoration Day function

ದೇಶ ಸುಭದ್ರವಾಗಿರಬೇಕೆಂದರೆ ಆ ದೇಶದ ಭದ್ರತೆ ದೃಢವಾಗಿರಬೇಕು. ಪೊಲೀಸ್​ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Araga jnanendra
ಆರಗ ಜ್ಞಾನೇಂದ್ರ
author img

By

Published : Oct 21, 2021, 1:30 PM IST

ಬೆಂಗಳೂರು: ಪೊಲೀಸ್ ಇಲಾಖೆಯ ಅಭಿವೃದ್ಧಿ ಹಾಗೂ ಸಿಬ್ಬಂದಿ ಕ್ಷೇಮಾಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜೊತೆಗೆ 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.

ಬೆಂಗಳೂರಿನ ಸಿಎಆರ್ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ತಮ್ಮ ಜೀವವನ್ನೇ ಪಣಕ್ಕಿಡುತ್ತಾರೆ. ನಾನು ಗೃಹ ಸಚಿವನಾದ ಮೇಲೆ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಪೊಲೀಸರು ಮರಣ ಹೊಂದಿದ ನಂತರ ಸಹ ಅವರ ಕುಟುಂಬಕ್ಕೆ ನೆರವು ನೀಡಲಾಗುತ್ತದೆ. ವಸತಿ ಕಟ್ಟಡ ನಿರ್ಮಾಣಕ್ಕಾಗಿ ಹತ್ತು ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಇನ್ನು 1.09.2020 ರಿಂದ 31.8. 2021 ರ ಅವಧಿಯಲ್ಲಿ ದೇಶಾದ್ಯಂತ ಒಟ್ಟು 377 ಮಂದಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಾರ್ಯನಿರ್ವಹಣಾ ಅವಧಿಯಲ್ಲಿ 16 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ. ಕೋವಿಡ್-19 ಪ್ರಾರಂಭದಿಂದ ಇದುವರೆಗೂ ರಾಜ್ಯದಲ್ಲಿ ಒಟ್ಟು 173 ಮಂದಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಎಲ್ಲರಿಗೂ ಗೌರವ ವಂದನೆ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.