ETV Bharat / state

ಆರಗ ತೀರ್ಥಹಳ್ಳಿಗೆ ಕಳಂಕ, ಕ್ಷಮೆ ಸಾಕಾಗಲ್ಲ.. ರಾಜೀನಾಮೆ ಪಡೆಯಬೇಕು: ಕಿಮ್ಮನೆ ರತ್ನಾಕರ್ - ಸಚಿವ ಈಶ್ವರ್​ ಖಂಡ್ರೆ

ಎಐಸಿಸಿ ಅಧ್ಯಕ್ಷ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್​ ಖಂಡ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಒತ್ತಾಯಿಸಿದ್ದಾರೆ.

araga-jnanendra-should-resign-says-former-minister-kimmane-ratnakar
ಆರಗ ತೀರ್ಥಹಳ್ಳಿಗೆ ಕಳಂಕ, ಕ್ಷಮೆ ಸಾಕಾಗಲ್ಲ, ರಾಜೀನಾಮೆ ಪಡೆಯಬೇಕು: ಕಿಮ್ಮನೆ ರತ್ನಾಕರ್
author img

By

Published : Aug 3, 2023, 6:23 PM IST

ಬೆಂಗಳೂರು : ಆರಗ ಜ್ಞಾನೇಂದ್ರ ಅವರು ಕ್ಷಮೆ ಕೇಳಿದರೆ ಉಪಯೋಗವಿಲ್ಲ, ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗೃಹಸಚಿವರಾಗಿ, ಎಂಪಿಎಂ ಅಧ್ಯಕ್ಷರಾಗಿ ಮತ್ತು ಅನೇಕ ಜವಾಬ್ದಾರಿಯುತ ಸ್ಥಾನಗಳನ್ನು ಆರಗ ಜ್ಞಾನೇಂದ್ರ ಅವರು ನಿಭಾಯಿಸಿದ್ದಾರೆ. ಇಂತಹ ವ್ಯಕ್ತಿ ಬಾಯಿ ತಪ್ಪಿನಿಂದ ಹೇಳಿದೆ, ಕಣ್ತಪ್ಪಿನಿಂದ ಹೇಳಿದೆ ಎನ್ನುವ ವಯಸ್ಸು ಅಲ್ಲ, ಜ್ಞಾನವೂ ಅಲ್ಲ. ಬಿಜೆಪಿಯ ಯಾವುದೇ ನಾಯಕರು ಆರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ, ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ? ಎಂದು ಪ್ರಶ್ನಿಸಿದರು.

ಮೋದಿಯವರು ಇಂತಹ ಮನಸ್ಥಿತಿ ಹೊಂದಿರುವವರೇ ಆಗಿದ್ದಾರೆ. ಏಕೆಂದರೆ ಅವರ ಸಂಪುಟದ ಅನೇಕ ಸದಸ್ಯರು ಈ ತರಹದ ಹೇಳಿಕೆ ನೀಡಿದಾಗಲೂ ಅವರು ಸುಮ್ಮನಿದ್ದರು. ಅನಂತ ಕುಮಾರ್‌ ಹೆಗಡೆ ಅವರ ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂಬ ಹೇಳಿಕೆಯಿಂದ ಹಿಡಿದು ಯತ್ನಾಳರ ತನಕದ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕಿಮ್ಮನೆ ಆರೋಪಿಸಿದರು.

ಆರಗ ಜ್ಞಾನೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು : ಆರಗ ಜ್ಞಾನೇಂದ್ರ ಅವರು ಕ್ಷಮೆ ಕೇಳಿ ಉಪಯೋಗವಿಲ್ಲ. ಅವರಿಂದ ರಾಜೀನಾಮೆ ಪಡೆಯಬೇಕು. ಖರ್ಗೆಯವರ ಹಾಗೂ ಈಶ್ವರ್ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ. ಅವರು ನಾನು ಖರ್ಗೆಯವರ ಹೆಸರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿದ್ದಾರೆ ಎಂದರು.

ಈ ಬಗ್ಗೆ ಸ್ಪೀಕರ್‌ಗೆ ದೂರು ಸಲ್ಲಿಸಲಾಗುವುದು, ಕೋರ್ಟಿಗೂ ಹೋಗಲಾಗುವುದು. ನಂದಿತಾ ಅವರ ಕೇಸಿನಲ್ಲೂ ಅತ್ಯಾಚಾರ ಎಂದು ಸುಳ್ಳು ಬಿಂಬಿಸಿದವರು ಆರಗ ಅವರು, ಪೊಲೀಸರನ್ನು ನಾಯಿಗಳು ಎಂದವರು, ಹೆಣ್ಣು ಮಕ್ಕಳು 7 ಗಂಟೆ ನಂತರ ಏಕೆ ಓಡಾಡಬೇಕು ಎಂದವರು ಇವರು. ಖರ್ಗೆಯವರ ವಿಚಾರದಲ್ಲಿ ಕೇವಲ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ, ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್‌ ಪತ್ರಿಭಟನೆ ಹಾಗೂ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿದರು.

ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಕಳಂಕ. ಕುವೆಂಪು ಅವರು, ಅನಂತಮೂರ್ತಿ, ಗೋಪಾಲಗೌಡರು, ಬದ್ರಿನಾರಾಯಣ್‌ ಅವರಂತಹ ಸಂಸದೀಯ ಪಟುಗಳು ಗೆದ್ದುಬಂದಂತಹ ಕ್ಷೇತ್ರಕ್ಕೆ ಅವರು ಅವಮಾನ ಮಾಡುತ್ತಿದ್ದಾರೆ. ಕಸ್ತೂರಿ ರಂಗನ್‌ ವಿಚಾರಕ್ಕೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರೇ ಒಪ್ಪಿಗೆ ನೀಡಿದ್ದಾರೆ. ನಮ್ಮ ಕಾಂಗ್ರೆಸ್‌ ಸರ್ಕಾರ ಇದಕ್ಕೆ ವಿರೋಧ ಮಾಡಿತ್ತು. ತೀರ್ಥಹಳ್ಳಿಯ ಜನರನ್ನು ಮಂಗ ಮಾಡಲು ಇಲ್ಲಿ ವಿರೋಧ ಮಾಡುವುದು, ಕೇಂದ್ರದಲ್ಲಿ ಒಪ್ಪಿಗೆ ನೀಡುವ ಕಣ್ಣಾಮುಚ್ಚಾಲೆ ಆಡುತ್ತಿದೆ ಎಂದು ಕಿಮ್ಮನೆ ರತ್ನಾಕರ್ ವಾಗ್ದಾಳಿ​ ನಡೆಸಿದರು.

ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಶಾಸಕರ ಅಸಮಾಧಾನವನ್ನು ವರಿಷ್ಠರು ಬಗೆಹರಿಸ್ತಾರೆ. ಹಿರಿಯರಿಗೆ ಸಚಿವಸ್ಥಾನ ನೀಡೋದು ವರಿಷ್ಠರಿಗೆ ಬಿಟ್ಟಿದ್ದು. ನಾನು ಮಿನಿಸ್ಟರ್ ಮಾಡಿ ಎಂದು ಹೇಳಿಲ್ಲ. ಅದನ್ನೆಲ್ಲಾ ವರಿಷ್ಠರ ಬಳಿ ಕೇಳಬೇಕು. ನಾನು ಸೋತಿದ್ದೀನಿ, ಕಾರ್ಯಕರ್ತ ಅಷ್ಟೇ. ಮುಂದಿನ ಯಾವುದೇ ಎಲೆಕ್ಷನ್​ಗೆ ಅಪೇಕ್ಷಿತನಲ್ಲ. ಮುಂದೇನು‌ ಎಂಬುದು ನನಗೆ ಗೊತ್ತಿಲ್ಲ. ನಾನು ಈಗ ಯಾವುದೇ ನಾಮಿನೇಶನ್ ಬಯಸಿಲ್ಲ. ನಾನು ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಸಂಘಟನೆ ಮಾಡುತ್ತೇನೆ‌. ಪಕ್ಷ ಹೇಳಿದರೆ ಆಗ ತೀರ್ಮಾನ ಮಾಡುತ್ತೇನೆ. ಚುನಾವಣಾ ಸ್ಪರ್ಧೆಗೆ ಟಿಕೆಟ್ ಕೇಳುವುದಿಲ್ಲ ಎಂದು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ನೀಡಿದರು.

ಕಾಂಗ್ರೆಸ್ ನಲ್ಲಿ ಮೂಲ-ವಲಸಿಗ ವಾರ್ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ನಾನೂ ಕೂಡ ವಲಸಿಗ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದಿದ್ದೇವೆ. ಮಾಜಿ ಸಿಎಂ ಬೊಮ್ಮಾಯಿ ವಲಸಿಗರು. ಬಿಜೆಪಿಯಲ್ಲಿರುವವರು ಶೇ.80 ದಳದವರು. ಮೂಲ ವಲಸಿಗೆ ಅಂತ ನಮ್ಮಲ್ಲಿ ಬೇಧಭಾವವಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ : ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಶಾಸಕ ಆರಗ ಜ್ಞಾನೇಂದ್ರ ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಕೆಪಿಸಿಸಿ ವಕ್ತಾರ ರಮೇಶ್ ಹೆಗ್ಡೆ ಸವಾಲೆಸೆದರು. ಶಿವಮೊಗ್ಗದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಡಾ. ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ಅರಣ್ಯ ಸಚಿವರ ವಿರುದ್ಧ ಪ್ರತಿಭಟನೆ ಮಾಡುವ ವೇಳೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ ಎಂದರು.

ವರ್ಣಭೇದ ನೀತಿಯ ಆಚರಣೆ ಕುರಿತು ಆರಗ ಜ್ಞಾನೇಂದ್ರ ಅವರ ಮನಸ್ಥಿತಿ ಏನು ಎಂಬುದು ಅವರ ಹೇಳಿಕೆಯಿಂದ ವ್ಯಕ್ತವಾಗಿದೆ. ಆರಗ ಜ್ಞಾನೇಂದ್ರ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಬಗ್ಗೆ ಮಾತನಾಡಿರುವುದು ಸರಿಯಲ್ಲ. ರಾಷ್ಟ್ರಕವಿ ಕುವೆಂಪು ಅವರು ಹುಟ್ಟಿದ ಊರನ್ನು ಪ್ರತಿನಿಧಿಸುವ ಇವರಿಗೆ ನಾಚಿಕೆ ಆಗಬೇಕು. ರಾಷ್ಟ್ರಕವಿ ಕುವೆಂಪು ಅವರು ವಿಶ್ವಪಥ ಮನುಜಮತ ಎಂಬ ಸಂದೇಶ ಸಾರಿದವರು. ಅವರ ಕ್ಷೇತ್ರವನ್ನು ಪ್ರತಿನಿಧಿಸುವ ಇವರು ವರ್ಣಭೇದ ನೀತಿ ಬಗ್ಗೆ ಮಾತನಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಶಾಸಕ ಆರಗ ಜ್ಞಾನೇಂದ್ರ ಹಾಗೂ ಸಂಸದ ರಾಘವೇಂದ್ರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಹಾಗಾಗಿ ಇವರು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಬೇಕು. 2014ರಲ್ಲಿ ನಾವು ಅಧಿಕಾರಕ್ಕೆ ಬಂದರೆ ಕಸ್ತೂರಿ ರಂಗನ್ ವರದಿ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎರಡು ಬಾರಿ ಅಫಿಡವಿಟ್​ ಸಲ್ಲಿಸಿದ್ದಾರೆ. ಹಾಗಾಗಿ ಪಶ್ಚಿಮಘಟ್ಟದ ಜನರ ಹಿತ ಕಾಪಾಡುವ ಆಸಕ್ತಿ ಇದ್ದರೆ ಇವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಪ್ರತಿಭಟನೆ ನಡೆಸಲಿ ಹೊರತು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಎಂದರು.

ಇದನ್ನೂ ಓದಿ : ಖರ್ಗೆ, ಖಂಡ್ರೆ ಕುರಿತು ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆಗೆ ಆಪ್​ನಿಂದಲೂ ಖಂಡನೆ: ಕೈ ನಾಯಕರ ಕ್ಷಮೆಯಾಚಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.