ETV Bharat / state

ಪರಿಷತ್​​ನ ನಾಲ್ಕು ಸ್ಥಾನಗಳಿಗೆ ಹೆಸರು ಶಿಫಾರಸು: ಬಿಜೆಪಿ ಹೈಕಮಾಂಡ್​ ಅಂಗಳಕ್ಕೆ ಅಭ್ಯರ್ಥಿಗಳ ಪಟ್ಟಿ! - ಅರವಿಂದ ಲಿಂಬಾವಳಿ

ನಾಲ್ಕು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ನಿರ್ಧಾರ ಕೈಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ಮೂಲ ಮತ್ತು ವಲಸಿಗರ ಹೆಸರುಗಳನ್ನೊಳಗೊಂಡಂತೆ ಆರಕ್ಕಿಂತ ಹೆಚ್ಚು ಮಂದಿಯ ಹೆಸರುಗಳನ್ನು ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.

Aravinda Limbavali
ಅರವಿಂದ ಲಿಂಬಾವಳಿ
author img

By

Published : Jun 15, 2020, 7:28 PM IST

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಸಂಖ್ಯಾಬಲದಂತೆ ಲಭ್ಯವಾಗಲಿರುವ ನಾಲ್ಕು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ವಲಸಿಗರು ಮತ್ತು ಮೂಲ ಬಿಜೆಪಿಗರ ಹೆಸರನ್ನು ಶಿಫಾರಸು ಮಾಡಲಾಗಿದೆ ಎನ್ನಲಾಗುತ್ತಿದೆ.

ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಅರವಿಂದ ಲಿಂಬಾವಳಿ

ಮಲ್ಲೇಶ್ವರಂನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪರಿಷತ್ ಸ್ಥಾನಕ್ಕೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಮಾತುಕತೆ ನಡೆಸಲಾಯಿತು. ಸರ್ಕಾರ ರಚನೆಗೆ ಕಾರಣರಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್, ಆರ್.ಶಂಕರ್, ಮಹೇಶ್ ಟೆಂಗಿನಕಾಯಿ, ನಿರ್ಮಲ್ ಕುಮಾರ್ ಸುರಾನಾ, ಸಿ.ಪಿ.ಯೋಗೀಶ್ವರ್, ಮಾಲೀಕಯ್ಯ ಗುತ್ತೇದಾರ್, ಸುನೀಲ್ ವಲ್ಯಾಪುರೆ ಸೇರಿದಂತೆ ಹಲವರ ಹೆಸರುಗಳು ಚರ್ಚೆಗೆ ಬಂದಿವೆ.

ಸುದೀರ್ಘ ಚರ್ಚೆ ನಂತರ ನಾಲ್ಕು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ನಿರ್ಧಾರ ಕೈಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ಮೂಲ ಮತ್ತು ವಲಸಿಗರ ಹೆಸರುಗಳನ್ನೊಳಗೊಂಡಂತೆ ಆರಕ್ಕಿಂತ ಹೆಚ್ಚು ಮಂದಿಯ ಹೆಸರುಗಳನ್ನು ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಪರಿಷತ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಹಲವು ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡುತ್ತಿದ್ದೇವೆ. ಅಂತಿಮವಾಗಿ ಕೇಂದ್ರ ಚುನಾವಣಾ ಸಮಿತಿ ತೀರ್ಮಾನ ಮಾಡಲಿದೆ. ಇದನ್ನು ಒತ್ತಿ ಒತ್ತಿ ಹೇಳುತ್ತಿದ್ದೇನೆ. ನಾಲ್ಕು ಸ್ಥಾನಗಳಿಗೆ ಹಲವರ ಹೆಸರುಗಳನ್ನು ಶಿಫಾರಸು ಮಾಡಿದ್ದೇವೆ. ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಚುನಾವಣೆ ಇರುವ ಕಾರಣಕ್ಕೆ ಈ ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ನಾಮ ನಿರ್ದೇಶನದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.