ಬೆಂಗಳೂರು : ಕೊರೊನಾ 2ನೇ ಅಲೆ ಆರ್ಭಟ ತಡೆಗಟ್ಟಲು ರಾಜ್ಯ ಸರ್ಕಾರ ಇದೀಗ ಮತ್ತೆ 14 ದಿನಗಳ ಲಾಕ್ಡೌನ್ ಜಾರಿ ಮಾಡಿದೆ. ಈ ಲಾಕ್‌ಡೌನ್‌ನಲ್ಲಿ ಸಣ್ಣ ಕೈಗಾರಿಕೆಗಳ ಕೆಲಸಕ್ಕೆ ಅನುಮತಿಸಲಾಗಿದೆ.
ಆದರೆ, ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಯಾವುದೇ ರೀತಿಯ ಸಾರಿಗೆ ಸೌಲಭ್ಯಗಳು ಇಲ್ಲದಿರುವ ಕಾರಣ ಕೆಲಸಗಾರರು ಕೆಲಸಕ್ಕೆ ಬರಲು ಸಮಸ್ಯೆ ಎದುರಿಸಲಿದ್ದಾರೆ.
ಹೀಗಾಗಿ, ಅವರಿಗಾಗಿ ಖಾಸಗಿ ಬಸ್ ವ್ಯವಸ್ಥೆಗೆ ಅವಕಾಶ ನೀಡಬೇಕು, ಇಲ್ಲವೆ ಅವರಿಗೆ ಕಾರ್ಖಾನೆಯಲ್ಲಿಯೇ ಉಳಿಯಲು ಸಾವಿರ ಬೆಡ್‌ಗಳ ವ್ಯವಸ್ಥೆ ಮಾಡಿಕೊಡಿ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.