ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ವಿರುದ್ಧ ಎಕ್ಸ್ ಖಾತೆಯಲ್ಲಿ ದುರುದ್ದೇಶಪೂರಿತ ಪೋಸ್ಟ್ ಮಾಡಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಾರ್ಟಿಯ ಐಟಿ ಸೆಲ್ ಉದ್ಯೋಗಿಯನ್ನು ಪೂರ್ವ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಿಆರ್‌ಎಸ್ ಪಕ್ಷದ ಕಾರ್ಯಕರ್ತ, ಪಕ್ಷದ ಐಟಿ ಸೆಲ್ ಉದ್ಯೋಗಿಯಾಗಿರುವ ತೆಲಂಗಾಣ ಕರೀಂನಗರ ನಿವಾಸಿ ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಆರೋಪಿಯ ತಂದೆ ಸಹ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್ ಎಂದು ತಿಳಿದು ಬಂದಿದೆ.
ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹ ಜ್ಯೋತಿ ಯೋಜನೆಯ ಅನುಷ್ಠಾನದ ಕುರಿತು ಆರೋಪಿಯು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಇಂಧನ ಸಚಿವರ ನಕಲಿ ಆಡಿಯೋ ಕ್ಲಿಪ್ ಪ್ರಸಾರ ಮಾಡಿದ್ದ. ಈ ಬಗ್ಗೆ 'ಎಕ್ಸ್'ನಿಂದ ಮಾಹಿತಿ ಪಡೆದು ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. @TelaguScribe ಎಂಬ 'ಎಕ್ಸ್' ಖಾತೆಯಲ್ಲಿ ಇಂಧನ ಸಚಿವರ ವಿರುದ್ಧ ದುರುದ್ದೇಶಪೂರಿತ ಡಿಯೋ ಪೋಸ್ಟ್ ಮಾಡಿದ್ದ ಕುರಿತು ಬೆಸ್ಕಾಂ ಜನರಲ್ ಮ್ಯಾನೇಜರ್ ಪೂರ್ವ ವಿಭಾಗದ ಸಿಇಎನ್ ಠಾಣೆಗೆ ದೂರು ಸಲ್ಲಿಸಿದ್ದರು.
ಇದನ್ನೂ ಓದಿ: ಕೇಂದ್ರದ ಭದ್ರತಾ ಲೋಪದಿಂದ ಸಂಸತ್ ಭವನದ ಮೇಲೆ ದಾಳಿ: ಜಮೀರ್ ಅಹ್ಮದ್