ETV Bharat / state

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಸರ್ಕಾರಿ ಇಂಜಿನಿಯರ್​ಗಳಿಗೆ ಕರೆ‌ ಮಾಡಿ ಹಣ ಪೀಕುತ್ತಿದ್ದ ವಂಚಕ ಸೆರೆ - ಲೋಕಾಯುಕ್ತ

ಲೋಕಾಯುಕ್ತ ಅಧಿಕಾರಿಯೆಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ
ಬಂಧಿತ ಆರೋಪಿ
author img

By ETV Bharat Karnataka Team

Published : Sep 1, 2023, 4:41 PM IST

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಇಂಜಿನಿಯರ್​ಗಳಿಗೆ ಫೋನ್‌ ಮಾಡಿ ದಾಳಿ ಮಾಡಿಸುವುದಾಗಿ ಬೆದರಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಪ್ರಮುಖ ಆರೋಪಿಯ ಸಹಚರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಪ್ರಮುಖ ಆರೋಪಿ ವಿಶಾಲ್ ಪಾಟೀಲ್ ಎಂಬಾತ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ‌.

ಆರೋಪಿಯನ್ನು 2020ರಲ್ಲಿ ವಂಚನೆ ಪ್ರಕರಣದಡಿ ಬೆಳಗಾವಿಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದು ಮತ್ತೆ ಹಳೆಯ ಚಾಳಿ ಮುಂದುವರೆಸಿದ್ದಾನೆ. ಸದ್ಯ ನಾಪತ್ತೆಯಾಗಿರುವ ಆರೋಪಿ ವಿಶಾಲ್, ಈ ಹಿಂದೆ ಎಸಿಬಿ ಅಧಿಕಾರಿ ಸೋಗಿನಲ್ಲಿ ಸರ್ಕಾರಿ ಇಂಜಿನಿಯರ್​ಗಳನ್ನು ಗುರಿಯಾಗಿಸಿಕೊಂಡು ಅವರಿಗೆ ಕರೆ ಮಾಡಿ ದಾಳಿ ಮಾಡಿಸುವುದಾಗಿ ಬೆದರಿಕೆ ಹಾಕುತ್ತಿದ್ದನಂತೆ.

ಎಸಿಬಿ ರದ್ದತಿ ಬಳಿಕ ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ವಂಚನೆ‌ ಗಾಳ ಮುಂದುವರೆಸಿದ್ದಾನೆ. ಸರ್ಕಾರಿ ಅಭಿಯಂತರರಿಗೆ ಕರೆ ಮಾಡಿ ಕಳಪೆ‌ ಕಾಮಗಾರಿ, ಅಕ್ರಮ ಆಸ್ತಿ ಗಳಿಸಿದ್ದೀರಾ ಎಂದು ಹೇಳಿ ರೈಡ್ ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದ‌. ಬೆದರಿಕೆಗಳಿಗೆ ಮಣಿದು ಅಧಿಕಾರಿಗಳು ಹಣ ಕೊಡುತ್ತಿದ್ದರು‌. ಹಣ ಸಂಗ್ರಹಿಸುವುದಾಕ್ಕಾಗಿಯೇ ಸಂತೋಷ್ ಕೊಪ್ಪದ್ ಎಂಬಾತನನ್ನು ನೇಮಿಸಿಕೊಂಡಿದ್ದ. ಇತ್ತೀಚೆಗೆ ಲಿಂಗಸೂರು, ಕುಷ್ಠಗಿ ವಿಭಾಗದ ಇಂಜಿನಿಯರ್‌ಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಎಂದು ಹೇಳಿ ದಾಳಿ ಮಾಡಿಸುವುದಾಗಿ ನಂಬಿಸಿ ವಿಧಾನಸೌಧ ಸುತ್ತಮುತ್ತ ಕರೆಯಿಸಿಕೊಂಡು ಹಣ ಪಡೆದುಕೊಂಡಿದ್ದ.

ಹಣ ಕೊಟ್ಟರೆ ಕೇಸ್ ಕ್ಲೋಸ್ ಮಾಡ್ತೀವಿ ಎಂದು ಹುಸಿ ಭರವಸೆ ನೀಡಿದ್ದ. ಈ ಬಗ್ಗೆ ಅನುಮಾನಗೊಂಡ ಸರ್ಕಾರಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಹಣ ನೀಡುವುದಾಗಿ ಕರೆಯಿಸಿಕೊಂಡು ಸಂತೋಷ್ ಕೊಪ್ಪದ್‌ನನ್ನು ಸೆರೆಹಿಡಿದಿದ್ದಾರೆ. ವಿಶಾಲ್ ಪಾಟೀಲ್ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ನಡೆದ ಘಟನೆ: ಲೋಕಾಯುಕ್ತ ಅಧಿಕಾರಿಗಳೆಂದು ಕರೆ ಮಾಡಿ ದಾಳಿ ಮಾಡುವುದಾಗಿ ಸರ್ಕಾರಿ ಮಹಿಳಾ ಅಧಿಕಾರಿಯೊಬ್ಬರನ್ನು ಬೆದರಿಸಿ ಹಣ ವಸೂಲಿ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಪೊಲೀಸರು ಬಂಧಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಕಡಪ ಮೂಲದ ಬುಚ್ಚುಪಲ್ಲಿ ವಿನೀತ್ ಕುಮಾರ್, ನಾಗೇಶ್ವರ್ ರೆಡ್ಡಿ, ಶಿವಕುಮಾರ್ ರೆಡ್ಡಿ ಎಂಬವರನ್ನು ಬಂಧಿಸಲಾಗಿತ್ತು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ನಗರ ಯೋಜನೆ ವಿಭಾಗದ ಜಂಟಿ ನಿರ್ದೇಶಕಿ ಆಶಾ ಸುರೇಶ್ ಅವರಿಗೆ ಆರೋಪಿಗಳು ಕರೆ ಮಾಡಿ ಬೆದರಿಸಿದ್ದರು.

ದೂರುದಾರರಿಗೆ ಕರೆ ಮಾಡಿದ್ದ ಆರೋಪಿ, ತನ್ನ ಹೆಸರು ಅಶೋಕ್ ರಾವ್, ತಾನೊಬ್ಬ ಲೋಕಾಯುಕ್ತ ಅಧಿಕಾರಿಯಾಗಿದ್ದು ನಿಮ್ಮ ಮನೆ ಮೇಲೆ ದಾಳಿ ಮಾಡಿ ನಿಮ್ಮ ವಿರುದ್ಧ ಎಡಿಜಿಪಿಗೆ ವರದಿ ನೀಡಲಾಗುತ್ತದೆ. ಇದನ್ನು ತಡೆಯಬೇಕಾದರೆ 2 ಲಕ್ಷ ಹಣ ನೀಡಬೇಕೆಂದು ಬೆದರಿಕೆವೊಡ್ಡಿದ್ದ. ಇದಕ್ಕೆ ಹೆದರಿ ಆಶಾ ಅವರು ಬ್ಯಾಂಕ್ ಮೂಲಕ 1 ಲಕ್ಷ ಹಣ ಆರೋಪಿತರ ಖಾತೆಗೆ ವರ್ಗಾಯಿಸಿದ್ದರು. ಹಣ ಜಮೆಯಾದ ಕೂಡಲೇ ಆರೋಪಿ ತನ್ನ ಮೊಬೈಲ್​ ಸ್ವಿಚ್ಆಫ್ ಮಾಡಿದ್ದ. ಅನುಮಾನಗೊಂಡು ಆಶಾ ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳು ಹೈದರಾಬಾದ್​ಗೆ ಪರಾರಿ ಆಗುವಾಗ ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Fake website: ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಮೂವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.