ಬೆಂಗಳೂರು: ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಚಿನ್ನದ ಸರ ಮತ್ತು ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿ ಚಿಕ್ಕಜಾಲ ಹಾಗೂ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಜಾಲ ಠಾಣಾ ಪೊಲೀಸರಿಂದ ನರೇಶ್, ಅಭಿಷೇಕ, ರಾಹುಲ್ ಎಂಬ ಆರೋಪಿಗಳನ್ನು ಬಂಧಿಸಿದ್ದು, ಕೊಡಿಗೆಹಳ್ಳಿ ಠಾಣಾ ಪೊಲೀಸರು ಜಾನ್ ಎಂಬಾತನನ್ನ ಹೆಡೆಮುರಿ ಕಟ್ಟಿದ್ದಾರೆ.
ಡಿಸೆಂಬರ್ 12 ರಂದು ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಕ್ಯಾಬ್ ಚಾಲಕನ ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ಚಿನ್ನಾಭರಣ, 53 ಸಾವಿರ ಮೌಲ್ಯದ ಮೊಬೈಲ್ ಫೋನ್‌ಗಳು ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.
ಮತ್ತೊಂದೆಡೆ ಜಾನ್ ಎಂಬಾತನನ್ನ ಬಂಧಿಸಿರುವ ಕೊಡಿಗೆಹಳ್ಳಿ ಪೊಲೀಸರು 1.62 ಲಕ್ಷ ಮೌಲ್ಯದ ಚಿನ್ನದ ಸರ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಅಬ್ರಹಾರ್ ಗ್ಯಾಂಗ್ ಮತ್ತೆ ಆ್ಯಕ್ವಿವ್