ಬೆಂಗಳೂರು: ಯಲಹಂಕ ಓಲ್ಡ್ ಟೌನ್ ಪೊಲೀಸರ ಕಾರ್ಯಾಚರಣೆಯಿಂದ ನಕಲಿ ನೋಟುಗಳ ಚಲಾವಣೆ ಮಾಡಲು ಮುಂದಾಗಿದ್ದ ಮೂವರನ್ನು ಬಂಧಿಸಲಾಗಿದೆ.
ಸೋಮನಗೌಡ (38), ಕಿರಣ್ ಕುಮಾರ್ (24), ನಂಜೇಗೌಡ (32) ಬಂಧಿತ ಆರೋಪಿಗಳು.
ಆರೋಪಿಗಳು ಯಲಹಂಕದ ಕೋಗಿಲು ಕ್ರಾಸ್ ಬಳಿ ಖೋಟಾನೋಟು ಚಲಾವಣೆಗೆ ಹೊಂಚು ಹಾಕುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 81 ಲಕ್ಷ ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.