ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮಹಿಳೆ ಹಾಗೂ ಕೃತ್ಯಕ್ಕೆ ಸಹಾಯ ಮಾಡಿದ ವ್ಯಕ್ತಿಯನ್ನು ಕೆಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಅನು ಹಾಗೂ ರೇಣುಕಾನಂದ ಬಂಧಿತ ಆರೋಪಿಗಳು. ಕೆಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಅನು ಹೋಟೆಲ್ ಜೊತೆಗೆ ಮನೆಗೆಲಸ ಮಾಡಿಕೊಂಡಿದ್ದಳು. ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನದ ಸರ ಮತ್ತು ಉಂಗುರ ಕದ್ದು ಆರೋಪಿ ರೇಣುಕಾನಂದನಿಗೆ ನೀಡಿದ್ದಳು.
ಮನೆಯ ಮಾಲೀಕರು ದೂರು ನೀಡಿದ ಹಿನ್ನೆಲೆ ವಿಚಾರಣೆ ನಡೆಸಿದಾಗ ಅನು ತಾನೇ ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಈ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.