ಬೆಂಗಳೂರು : ಸದ್ಯ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಪ್ರತಿದಿನ ಸೋಂಕಿತರು ಪರದಾಡುತ್ತಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಆಜ್ಞೆಯ ಬಳಿಕ ಕೇಂದ್ರ ಸರ್ಕಾರ ಆಕ್ಸಿಜನ್ನ ರಾಜ್ಯಕ್ಕೆ ಕಳುಹಿಸುತ್ತಿದೆ. ಇಂದು ನಾಲ್ಕನೇ ಹಂತದಲ್ಲಿ 120 ಟನ್ ಆಕ್ಸಿಜನ್ ರಾಜ್ಯಕ್ಕೆ ಕಳುಹಿಸಲಾಗಿದೆ.
ನಾಲ್ಕನೇ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಟಾಟಾ ನಗರದಿಂದ ಲೋಡ್ ಮಾಡಿ ನಿನ್ನೆ ಮಧ್ಯಾಹ್ನ 3:30ಕ್ಕೆ ಬೆಂಗಳೂರಿಗೆ ಹೊರಟಿತ್ತು.
ಇದೀಗ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರಿನ ವೈಟ್‌ಫೀಲ್ಡ್ ಟರ್ಮಿನಲ್ಗೆ ಆಗಮಿಸಿದೆ.
ಈ ಆಕ್ಸಿಜನ್ ಎಕ್ಸ್‌ಪ್ರೆಸ್‌ನ ತ್ವರಿತ ಸಾಗಣೆಯನ್ನು ಸಕ್ರಿಯಗೊಳಿಸಲು ರೈಲ್ವೆ ಸಿಗ್ನಲ್ ಮುಕ್ತ 'ಗ್ರೀನ್ ಕಾರಿಡಾರ್' ರಚಿಸಿ ಸಾಗಾಣಿಕೆಗೆ ನೆರವು ಮಾಡಿಕೊಡಲಾಗಿದೆ.
ಈವರೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 480 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ರೈಲು ಮೂಲಕ ಕಳುಹಿಸಿಕೊಟ್ಟಿದೆ.
ಕೇಂದ್ರ ಸರ್ಕಾರ ಆಕ್ಸಿಜನ್ ಕಳುಹಿಸಿ ಕೊಟ್ಟ ನಂತರ ಕರ್ನಾಟಕದಲ್ಲಿ ಕೊಂಚಮಟ್ಟಿಗೆ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಿದ್ದು, ಸಾವಿನ ಸಂಖ್ಯೆ ಕೂಡ ಕಡಿಮೆ ಆಗಿದೆ.