ಬೆಂಗಳೂರು: ಲಾಕ್ಡೌನ್ ನಡುವೆಯೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮನೆಗೆ ಇಂದು ಹೊಸ ಅತಿಥಿಗಳು ಬಂದಿದ್ದಾರೆ.
ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗಿರ್ ತಳಿಯ ಎರಡು ಹಸುಗಳನ್ನು ನೀಡಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಸೇರಿದಂತೆ ಅವರ ಕುಟುಂಬ ವರ್ಗ ಹೊಸ ಅತಿಥಿಗಳನ್ನು ಸ್ವಾಗತ ಮಾಡಿದರು.
ಒಂದು ಹಸುವಿಗೆ ಪುಟ್ಟ ಕರು ಇದ್ದು, ಪೂಜೆ ನೆರವೇರಿಸಿ ಗೋವುಗಳನ್ನು ಬರಮಾಡಿಕೊಳ್ಳಲಾಯಿತು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಹಸುಗಳಿಗಾಗಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಲಾಗಿದೆ.