ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ರಾಜ್ ಆಪ್ತ ಅರುಣ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಎಸ್ಡಿಪಿಐ ಮುಖಂಡ ಮುಜಮಿಲ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಡಿ ಅರುಣ್ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿದ್ದರಿಂದ ಇಂದು ಅರುಣ್ನನ್ನು ಬಂಧಿಸಲಾಗಿದೆ.
![Ex mayor's aide Arun arrested in Bangaluru](https://etvbharatimages.akamaized.net/etvbharat/prod-images/kn-bng-07-ccb-arrest-crime-7202806_19082020203210_1908f_1597849330_909.jpg)
ನಾಳೆ ವಿಡಿಯೊ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಲಭೆ ವೇಳೆ ಮುಜಮಿಲ್ ಜೊತೆ ಅರುಣ್ ಫೋನ್ ಮೂಲಕ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಗಲಭೆಯ ವಿಡಿಯೋ ತರಿಸಿಕೊಂಡು ವೀಕ್ಷಣೆ ಮಾಡಿ ಬೇರೆಯವರಿಗೆ ಕಳುಹಿಸಿದ್ದ.