ಬೆಂಗಳೂರು: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ಬಿಜೆಪಿಯ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭವನ್ನೂ ಮುಂದೂಡಿಕೆ ಮಾಡಲಾಗಿದೆ.
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಲಾಗಿದ್ದು, ನಾಳೆ ಪಕ್ಷದ ಕಚೇರಿಯಲ್ಲಿ ನಡೆಯಬೇಕಿದ್ದ ಅಧಿಕಾರ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗಿದೆ. ನೂತನ ರಾಜ್ಯಾಧ್ಯಕ್ಷರ ಪದಗ್ರಹಣದ ದಿನಾಂಕವನ್ನು ಸಧ್ಯದಲ್ಲೇ ಪ್ರಕಟಿಸುವುದಾಗಿ ಬಿಜೆಪಿ ತಿಳಿಸಿದೆ.
ಇದೇ ವೇಳೆ, ಬಿಜೆಪಿಯ ಮಹತ್ವಾಕಾಂಕ್ಷೆಯ ಸದಸ್ಯತಾ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಕೂಡ ರದ್ದುಗೊಂಡಿದೆ. ನಾಳೆ ನಡೆಯಬೇಕಿದ್ದ ಸಭೆಯನ್ನು ಮುಂದೂಡಗಿದೆ.