ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಅರುಣ್ ಸಿಂಗ್ ಮೊದಲ ಬಾರಿಗೆ ಪಕ್ಷದ ಮುಖ್ಯ ಕಚೇರಿಯಾದ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ನಾಯಕರು ಹಾಗು ಕಾರ್ಯಕರ್ತರು ಅದ್ದೂರಿಯಾಗಿ ಪೂರ್ಣ ಕುಂಭ ಸ್ವಾಗತ ಕೋರಿದರು.
ಓದಿ: ಕುಮಾರಸ್ವಾಮಿ ಲೂಸ್ ಟಾಕ್ ಕಡೆಗಣಿಸಲು ತೀರ್ಮಾನ: ಹೆಚ್ಡಿಕೆ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ತಂತ್ರ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗು ಭಾರತ ಮಾತೆಯ ಭಾವಚಿತ್ರಕ್ಕೆ ಸಿಂಗ್ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಜ್ಯ ಬಿಜೆಪಿ ಮುಖಂಡರ ಸಭೆ ನಡೆಸಿದರು. ಸಚಿವರಾದ ಸುರೇಶ್ ಕುಮಾರ್, ಭೈರತಿ ಬಸವರಾಜ್, ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ ಮುಂತಾದವರು ಸಿಂಗ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.