ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಮ್ಮ ಮನೆಯಲ್ಲೇ ಕೋವಿಡ್ ವ್ಯಾಕ್ಸಿನ್ ಪಡೆದಿದ್ದರು. ಇದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಓದಿ: ಮನೆಯಲ್ಲೇ ಕೋವಿಡ್ ಲಸಿಕೆ ಹಾಕಿಸಿಕೊಂಡ ಸಚಿವ ಬಿ.ಸಿ. ಪಾಟೀಲ್
ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನೀಡಿರುವ ನಿರ್ದೇಶಕಿ ಅರುಂಧತಿ, ಜಿಲ್ಲಾ ಆರ್ಸಿಎಚ್ ಡಾ. ಜಯಾನಂದ್ಗೆ ನೋಟಿಸ್ ನೀಡಿದ್ದಾರೆ. ಕೋವಿಡ್ ಲಸಿಕೆಯನ್ನು ಕೇವಲ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಬೇಕು. ಈ ಕುರಿತಂತೆ ಹಲವು ಸಭೆಗಳಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆದರೂ ಈ ಅವಾಂತರ ಹೇಗೆ ನಡೆಯಿತು ಎಂದು ನೋಟಿಸ್ನಲ್ಲಿ ಪ್ರಶ್ನೆ ಮಾಡಿದ್ದಾರೆ.
ಓದಿ: ಮನೆಯಲ್ಲಿ ಕೋವಿಡ್ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್: ವರದಿ ಕೇಳಿದ ಕೇಂದ್ರ ಸರ್ಕಾರ
ಈ ಘಟನೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಘನತೆಗೆ ಧಕ್ಕೆ ಉಂಟಾಗಿದೆ. ಇದು ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿದ್ದು, ಆಕ್ಷೇಪಾರ್ಹವಾಗಿದೆ.ಈ ಪತ್ರ ತಲುಪಿದ ಕೂಡಲೇ ಸಮಜಾಯಿಷಿ ನೀಡಿ ಎಂದು ಸೂಚನೆ ನೀಡಿದ್ದಾರೆ. ತಪ್ಪಿದ್ದಲ್ಲಿ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವ ಎಚ್ಚರಿಕೆಯನ್ನು ನಿರ್ದೇಶಕಿ ಅರುಂಧತಿ ನೀಡಿದ್ದಾರೆ.