ಬೆಂಗಳೂರು : ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಸಿಕ ಗೌರವ ಧನ ₹12,000ಕ್ಕೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಎಐಟಿಯುಸಿ ವತಿಯಿಂದ ನಗರದ ಫ್ರೀಡಂ ಪಾರ್ಕ್ ಮುಂಭಾಗದ ರಸ್ತೆಯಲ್ಲಿ ನೂರಾರು ಜನ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಜುಲೈ 10ರಂದು ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಸತತ ಇಪ್ಪತ್ತು ದಿನ ಮುಷ್ಕರ ನಡೆಸಿದ್ದರು. ಆಗ ₹12 ಸಾವಿರ ಮಾಸಿಕ ಗೌರವಧನ ನಿಗದಿ ಮಾಡಿದ್ದ ಸರ್ಕಾರ, ಈಗ ಮಾತಿಗೆ ತಪ್ಪಿದೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯ ರಕ್ಷಣಾ ಸಾಮಗ್ರಿ ಹಾಗೂ ಮಾಸಿಕ ಗೌರವ ಧನಕ್ಕೆ ಆಗ್ರಹಿಸಿ ಮತ್ತೆ ಮುಷ್ಕರ ನಡೆಸುತ್ತಿದ್ದು, ಸ್ಥಳಕ್ಕೆ ಸಿಎಂ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.