ಬೆಂಗಳೂರು : ಸರ್ಕಾರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಸಮರ ಸಾರಲು ಮುಂದಾಗಿದ್ದಾರೆ. ಪಿಂಚಣಿ ಯೋಜನೆ ಜಾರಿ, ಅಂಗನವಾಡಿಯಲ್ಲೇ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳ ಆರಂಭ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟಕೊಟ್ಟು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನೆ ರ್ಯಾಲಿ ನಡೆಸಲು ಪ್ಲಾನ್ ರೂಪಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತೆಯರು ಆಗಮಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ನನಗೆ ವೇತನ ಬೇಡ, 1 ರೂ. ಗೌರವಧನ ಸಾಕು: ಮದನ್ ಗೋಪಾಲ್
ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ಬಳಿಕ ಸಚಿವೆ ಶಶಿಕಲಾ ಜೊಲ್ಲೆಗೆ ಮನವಿ ನೀಡಲು ನಿರ್ಧಾರ ಮಾಡಿಲಾಗಿದ್ದು, ಮೆಜೆಸ್ಟಿಕ್, ಶೇಷಾದ್ರಿ ರಸ್ತೆ, ಮೌರ್ಯ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.