ETV Bharat / state

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅಧಿಕಾರ ಸ್ವೀಕಾರ

ಅಶೋಕ್ ಕಶ್ಯಪ್ ಕನ್ನಡ ಚಿತ್ರರಂಗದಲ್ಲಿ ಹಿರಿಯ ಸಿನಿಮಾಟೋಗ್ರಾಫರ್ ಆಗಿದ್ದು, ಅವರ ಶಾಪ ಚಿತ್ರದ ಛಾಯಾಗ್ರಾಹಣಕ್ಕೆ ರಾಜ್ಯ ಪ್ರಶಸ್ತಿ ದೊರೆತಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅಧಿಕಾರ ಸ್ವೀಕಾರ

author img

By

Published : Nov 7, 2022, 10:16 PM IST

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಿನಾಂಕ 05-11-2022ರಂದು ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಆದೇಶಿಸಿತ್ತು.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅಧಿಕಾರ ಸ್ವೀಕಾರ
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಅಧಿಕಾರ ಸ್ವೀಕಾರ

ಇನ್ನು ಅಶೋಕ್ ಕಶ್ಯಪ್ ಅವರು ಕನ್ನಡ ಚಿತ್ರರಂಗದಲ್ಲಿ ಹಿರಿಯ ಸಿನಿಮಾಟೋಗ್ರಾಫರ್ ಆಗಿದ್ದು, ಅವರ 'ಶಾಪ' ಚಿತ್ರದ ಛಾಯಾಗ್ರಾಹಣಕ್ಕೆ ರಾಜ್ಯ ಪ್ರಶಸ್ತಿ ದೊರೆತಿದೆ. ಭುವನಜ್ಯೋತಿ, ಶ್, ಕರುಣಿನಕೂಗು, ಸೂಪರ್, ಉಪ್ಪಿ2, ಕಾಫಿತೋಟ ಸೇರಿದಂತೆ ವಿವಿಧ ಚಿತ್ರಗಳಿಗೆ ಸಿನಿಮಾಟೋಗ್ರಾಫರ್ ಆಗಿ ದುಡಿದಿದ್ದಾರೆ. ಅಲ್ಲದೇ, ಚಿತ್ರ ನಿರ್ದೇಶನ ಮತ್ತು ನಟನೆಯಲ್ಲಿ ಸಹ ಅವರು ತಮ್ಮ ಪ್ರತಿಭೆಯನ್ನು ತೋರಿದ್ದಾರೆ.

ಇದರ ಜೊತೆಗೆ ಕನ್ನಡ ಚಿತ್ರರಂಗದ ತಾಂತ್ರಿಕ ವರ್ಗದಲ್ಲಿ ದುಡಿದ ತಮ್ಮನ್ನು ಸರ್ಕಾರ ಗುರುತಿಸಿ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಿನಿಮಾ ತಾಂತ್ರಿಕ ವರ್ಗಕ್ಕೆ ಖುಷಿ ತಂದಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಹಾಗೂ ಕನ್ನಡ ಚಿತ್ರರಂಗದಲ್ಲಿ ಈವರೆಗೆ ದುಡಿದು ಪಡೆದ ತಮ್ಮ ಅನುಭವವನ್ನು ಅಕಾಡೆಮಿ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಸೋಮವಾರ ಅಧ್ಯಕ್ಷರಾಗಿ ಅಧಿಕಾರಿ ವಹಿಸಿಕೊಂಡಿದ್ದು, ಹಿರಿಯ ನಿರ್ದೇಶಕರು ಹಾಗೂ ಅಕಾಡೆಮಿಯ ಹಿಂದಿನ ಅಧ್ಯಕ್ಷರಾದ ಟಿ. ಎಸ್ ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಸಿನಿಮಾಟೋಗ್ರಾಫರ್ ಬಸವರಾಜ್ ಸೇರಿದಂತೆ ಹಲವು ಗಣ್ಯರು, ಚಿತ್ರ ನಿರ್ದೇಶಕರು, ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಕೋರಿದರು.

ಓದಿ: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.