ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿದ ಇಂಟರ್ ನ್ಯಾಷನ್ ಹೋಟೆಲ್ ವಿರುದ್ಧ ಅಶೋಕ್ ನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
2020ಅನ್ನು ಸ್ವಾಗತ ಮಾಡಲು ಸಜ್ಜಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮಧ್ಯರಾತ್ರಿ 2 ಗಂಟೆಯವರೆಗೆ ಹೋಟೆಲ್, ಪಬ್, ಬಾರ್ ಗ್ರಾಹಕರ ಸೇವೆಗೆ ಅವಕಾಶ ನೀಡಲಾಗಿತ್ತು. ಆದರೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಶೋಕ್ ನಗರ ಠಾಣಾ ರಸ್ತೆಯಲ್ಲಿರುವ ಓಸಿಯಾ ಇಂಟರ್ ನ್ಯಾಷನಲ್ ಹೋಟೆಲ್ ಇದನ್ನ ಲೆಕ್ಕಿಸದೇ ಅವಧಿಗೂ ಮೀರಿ ಗ್ರಾಹಕರಿಗೆ ಊಟ ಸರಬರಾಜು ಮಾಡಿತ್ತು ಎನ್ನಲಾಗಿದೆ.
ಇದೇ ವೇಳೆ ಮಫ್ತಿಯಲ್ಲಿದ್ದ ಅಶೋಕ್ ನಗರ ಪೊಲೀಸರು ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಓಸಿಯಾ ಇಂಟರ್ ನ್ಯಾಷನಲ್ ಹೋಟೆಲ್ ಮ್ಯಾನೇಜರ್ ಪ್ರಾನ್ಸಿನ್ ವಿರುದ್ಧ ಸ್ವಂಯಂ ಪ್ರೇರಿತವಾಗಿ ದೂರು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.