ETV Bharat / state

700 ದಿನಗಳ ಅಧಿಕಾರವಧಿಯಲ್ಲಿ 3 ಸಾವಿರಕ್ಕೂ ಹೆಚ್ಚು ಕಡತ ವಿಲೇವಾರಿ: ಮಾಜಿ ಡಿಸಿಎಂ ದಾಖಲೆ

ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ‌ ದಾಖಲೆ ನಿರ್ಮಿಸಿದ್ದಾರೆ.

ashwath  narayan made record in File Disposal
ಮಾಜಿ ಡಿಸಿಎಂ
author img

By

Published : Jul 29, 2021, 5:54 PM IST

ಬೆಂಗಳೂರು: ಉನ್ನತ ಶಿಕ್ಷಣ, ಐಟಿ- ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ‌ ದಾಖಲೆ ಮಾಡಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು 26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿ, ಬಾಕಿ ಕಡತಗಳ ಪ್ರಮಾಣವನ್ನು ಶೂನ್ಯಕ್ಕೆ ತಂದಿದ್ದಾರೆ.

ಇ-ಆಫೀಸ್‌ (ಕಾಗದ ರಹಿತ ಕಡತ) ವ್ಯವಸ್ಥೆಯ ಮೂಲಕವೂ ಸಾವಿರಾರು ಕಡತಗಳನ್ನು ಪಾರದರ್ಶಕವಾಗಿ ವಿಲೇವಾರಿ ಮಾಡಲಾಗಿದೆ. ಇ- ಕಚೇರಿ ಮೂಲಕವೇ ವಿಶ್ವವಿದ್ಯಾಲಯಗಳ ಕಡತಗಳ ವಿಲೇವಾರಿ ಕೂಡ ಆರಂಭವಾಗಿದೆ.

ಒಟ್ಟು 3,760 ಕಡತ ವಿಲೇವಾರಿ:

ಅಶ್ವತ್ಥ ನಾರಾಯಣ ಅವರು ತಾವು ಅಧಿಕಾರ ಸ್ವೀಕರಿಸಿದಾಗಿನಿಂದ ನಿರ್ಗಮಿಸುವ ದಿನದವರೆಗೂ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿದ್ದಾರೆ. ಬಂದ ಕಡತಗಳನ್ನು ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಒಟ್ಟು 1,746 ಮ್ಯಾನುಯಲ್ ಕಡತಗಳು ಬಂದಿದ್ದು, ಅಷ್ಟನ್ನೂ ಅವರು ವಿಲೇವಾರಿ ಮಾಡಿದ್ದಾರೆ. ಜತೆಗೆ, 1,441 ಇ-ಕಡತಗಳು ಬಂದಿದ್ದು, ಅವೂ ವಿಲೇವಾರಿ ಆಗಿವೆ.

ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ-ಬಿಟಿ ಇಲಾಖೆಯಲ್ಲಿ 62 ಮ್ಯಾನುಯಲ್ ಕಡತಗಳು, 86 ಇ-ಕಡತಗಳು ಮಾಜಿ ಡಿಸಿಎಂ ಅವರಿಂದ ವಿಲೇವಾರಿ ಆಗಿವೆ. ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ 84 ಮ್ಯಾನುಯಲ್ ಕಡತಗಳು, 96 ಇ-ಕಡತಗಳು ಬಂದಿದ್ದವು.ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಂದಿದ್ದ 245 ಮ್ಯಾನುಯಲ್ ಕಡತಗಳನ್ನೂ ಡಾ.ಅಶ್ವತ್ಥ ನಾರಾಯಣ ಕ್ಲಿಯರ್‌ ಮಾಡಿದ್ದಾರೆ.

ಒಟ್ಟಾರೆಯಾಗಿ ಅವರು 2,137 ಮ್ಯಾನುಯಲ್ ಕಡತಗಳು, 1,633 ಇ-ಕಡತಗಳನ್ನು ಬಾಕಿ ಇಟ್ಟುಕೊಳ್ಳದೇ ವಿಲೇವಾರಿ ಮಾಡಿದ್ದಾರೆ. ಕೆಲವೊಮ್ಮೆ ರಾತ್ರಿ ಹತ್ತು ಗಂಟೆಯವರೆಗೂ ಕಚೇರಿಯಲ್ಲೇ ಕೂತು ಕಡತಗಳನ್ನು ವಿಲೇವಾರಿ ಮಾಡಿದ್ದರು.

ಯಾವುದೇ ಕೆಲಸವನ್ನು ಬಾಕಿ ಇಟ್ಟುಕೊಳ್ಳುವುದು ನನ್ನ ಜಾಯಮಾನವಲ್ಲ. ಬಂದ ಕಡತವನ್ನೂ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಾಧ್ಯವಾದಷ್ಟು ತ್ವರಿತವಾಗಿ ಕ್ಲಿಯರ್‌ ಮಾಡಿದ್ದೇನೆ. ಪ್ರವಾಸ ಇದ್ದಾಗ ಒಂದು ಅಥವಾ ಎರಡು ದಿನ ತಡವಾಗಿರುವುದು ಬಿಟ್ಟರೆ ಬಾಕಿ ಇಟ್ಟುಕೊಳ್ಳುವ ಪ್ರಶ್ನೆಯೇ ಇರಲಿಲ್ಲ. ಇ-ಆಫೀಸ್‌ ವ್ಯವಸ್ಥೆಯಿಂದ ಅನೇಕ ಫೈಲುಗಳು ವೇಗವಾಗಿ ವಿಲೇವಾರಿ ಆಗಿವೆ. ಇದರಿಂದ ನಾನು ನಿರ್ವಹಣೆ ಮಾಡುತ್ತಿದ್ದ ಎಲ್ಲ ಇಲಾಖೆಗಳಲ್ಲಿ ಕ್ಷಮತೆ ಹೆಚ್ಚಾಗಿದೆ. ಕಡತ ವಿಲೇವಾರಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಂಬಂಧ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಆಸಕ್ತಿ ತೋರಿದ್ದು ಇದು ಒಳ್ಳೆಯ ಬೆಳವಣಿಗೆ. ಇದರಿಂದ ಪಾರದರ್ಶಕತೆ ಬರುತ್ತೆ ಎಂಬುದು ನನ್ನ ನಂಬಿಕೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.