ಬೆಂಗಳೂರು: ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಎಎಸ್ಐ ಒಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ವಿಧಾನಸೌದದ ಸೆಕ್ಯುರಿಟಿ ಠಾಣೆಯಲ್ಲಿ ಎಸ್ಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶಯ್ಯ ಎಂಬುವರು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಡೆಂಗ್ಯೂ ಹೆಚ್ಚಾದ ಕಾರಣ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತದೇಹವನ್ನ ಕೋವಿಡ್ ಟೆಸ್ಟ್ಗೆ ಒಳಪಡಿಸಿದ್ದು, ತದ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.