ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಅಸ್ಸೋಂ ರಾಜ್ಯದ ಮುಖ್ಯಮಂತ್ರಿ ಡಾ.ಹಿಮಂತ ಬಿಶ್ವ ಶರ್ಮ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ಗೆ ಆಗಮಿಸಿದ ಅಸ್ಸೋಂ ಸಿಎಂ ಹಿಮಂತ ಬಿಶ್ವ ಶರ್ಮ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯದ ಪರವಾಗಿ ಸ್ವಾಗತ ಕೋರಿ ಸಂಪ್ರದಾಯದಂತೆ ಗೌರವ ಸಲ್ಲಿಸಿದರು.
ನಂತರ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೆಲ ಕಾಲ ಮಾತುಕತೆ ನಡೆಸಿದರು. ಅನೌಪಚಾರಿಕವಾಗಿ ನಡೆದ ಮಾತುಕತೆ ವೇಳೆ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆದಿದ್ದು, ಯಾವುದೇ ರಾಜಕೀಯ ವಿಚಾರಗಳ ಚರ್ಚೆಯಾಗಿಲ್ಲ ಎನ್ನಲಾಗ್ತಿದೆ.
ಇದನ್ನೂ ಓದಿ: ಮದುವೆ ನಡೆಯುತ್ತಿದ್ದಾಗಲೇ ವರ ಮದ್ಯಪಾನ.. ಅದೇ ಮಂಟಪದಲ್ಲಿ ಬೇರೆಯವನೊಂದಿಗೆ ಸಪ್ತಪದಿ ತುಳಿದ ವಧು!