ಬೆಂಗಳೂರು : ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. 40 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಇಬ್ಬರು ವ್ಯಕ್ತಿಗಳು ಮಂಜು ಎಂಬ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ.
ನಿನ್ನೆ ರಾತ್ರಿ ಮೈಸೂರು ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿ ಟಿವಿ ದೃಶ್ಯ ಆಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.