ETV Bharat / state

ವಿದ್ವತ್​ ಮೇಲಿನ ಹಲ್ಲೆ ಪ್ರಕರಣ: ವಿಚಾರಣೆಗೆ ಮುಂದಾದ ನ್ಯಾಯಾಲಯ... ನಲಪಾಡ್​ಗೆ ಸಂಕಷ್ಟ

author img

By

Published : Nov 15, 2022, 9:59 PM IST

ವಿದ್ವತ್ ಮೇಲಿನ ಹಲ್ಲೆ ಆರೋಪ ಸಂಬಂಧ ಯುವಕ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ವಿರುದ್ಧದ ಪ್ರಕರಣ ವಿಚಾರಣೆ ಮುಂದುವರಿಸಲು ಬೆಂಗಳೂರು ನಗರ ಕೋರ್ಟ್ ತೀರ್ಮಾನಿಸಿದೆ.

ನಲಪಾಡ್
ನಲಪಾಡ್

ಬೆಂಗಳೂರು: ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ವಿರುದ್ಧದ ಪ್ರಕರಣದ ವಿಚಾರಣೆ ಪ್ರಾರಂಭಿಸಲು ನಗರದ 66ನೇ ನ್ಯಾಯಾಲಯ ತೀರ್ಮಾನಿಸಿದೆ.

ಪ್ರಕರಣದ ವಿಚಾರಣೆಗೆ ಈ ಹಿಂದೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ವಿಸ್ತರಣೆ ಮಾಡಿಲ್ಲ. ಈ ನಿಟ್ಟಿನಲ್ಲಿ ವಿಚಾರಣೆಯನ್ನು ಮುಂದುವರಿಸಲು ಸೆಷನ್ಸ್ ಕೋರ್ಟ್ ನಿರ್ಧರಿಸಿದೆ. ಜೊತೆಗೆ ಪ್ರಕರಣದಲ್ಲಿ ವಿಶೇಷ ಅಭಿಯೋಜಕರಾಗಿ ಹಿರಿಯ ನ್ಯಾಯವಾದಿ ಎಂ.ಎಸ್. ಶ್ಯಾಮ್ ಸುಂದರ್ ಮುಂದುವರಿಕೆಗೆ ಅನುಮತಿ ನೀಡಿದೆ.

ಆದರೆ ಶ್ಯಾಮ್ ಸುಂದರ್ ಈಗ ಹಿರಿಯ ವಕೀಲರಾಗಿರುವ ಹಿನ್ನೆಲೆಯಲ್ಲಿ ಅವರು ಎಸ್​​ಪಿಪಿಯಾಗಿ ಮುಂದುವರಿಯುವಂತಿಲ್ಲ ಎಂದು ನಲಪಾಡ್ ಪರ ವಕೀಲರು, ನ್ಯಾ.ನಟರಾಜ್ ಅವರಿದ್ದ ನ್ಯಾಯಪೀಠದ ಮುಂದೆ ಆಕ್ಷೇಪ ವ್ಯಕ್ತಪಡಿಸಿದರು. ಆದರೆ ನಲಪಾಡ್ ಪರ ವಕೀಲರ ಆಕ್ಷೇಪ ತಳ್ಳಿಹಾಕಿದ ಕೋರ್ಟ್, ಸಾಕ್ಷ್ಯ ವಿಚಾರಣೆ ಮುಂದುವರಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತು. ಹಾಗಾಗಿ ನಲಪಾಡ್‌ಗೆ ಸಂಕಷ್ಟ ಎದುರಾಗಿದೆ.

ಪ್ರಕರಣದ ಹಿನ್ನೆಲೆ: ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಯುಬಿ ಸಿಟಿಯ ಫರ್ಜಿ ಕಫೆಯಲ್ಲಿ 2018ರ ಫೆ.17ರಂದು ರಾತ್ರಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. 2018ರ ಜೂ.14ರಂದು ಹೈಕೋರ್ಟ್ ಜಾಮೀನು ನೀಡುವಾಗ ಆರೋಪಿ ಬೆಂಗಳೂರು ನಗರದ ನ್ಯಾಯಾಲಯ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬಾರದೆಂಬ ಷರತ್ತು ವಿಧಿಸಿತ್ತು.

ನಂತರ ಹೈಕೋರ್ಟ್, ಆರೋಪಿಗೆ ಮೆಕ್ಕಾಗೆ ತೆರಳಲು ಜಾಮೀನು ಸಡಿಲಿಕೆ ಮಾಡಿತ್ತು. ಅಲ್ಲದೆ, ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು. ಆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡುತ್ತಾ ಬಂದಿದ್ದರಿಂದ ನಲಪಾಡ್ ನಿರಾಳರಾಗಿದ್ದರು. ಆದರೆ ಇದೀಗ ತಡೆಯಾಜ್ಞೆ ವಿಸ್ತರಣೆ ಮಾಡದೇ ಇರುವುದರಿಂದ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ.

(ಓದಿ: 'ಈ ಹುಡುಗ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ, ವಾಹ್!': ನಲಪಾಡ್‌ ವಿರುದ್ಧ ಗುಡುಗಿದ ರಮ್ಯಾ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.