ETV Bharat / state

ಬಿಟಿಎಂ ಲೇಔಟ್​​ನಲ್ಲಿ ಮತ್ತೆ ಸೋಲಿಲ್ಲದ ಸರದಾರರಾಗುವರೇ ರಾಮಲಿಂಗಾರೆಡ್ಡಿ! - ರಾಮಲಿಂಗಾರೆಡ್ಡಿ

ಬಿಟಿಎಂ ಲೇಔಟ್​​ನಲ್ಲಿ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಕಂಡ ರಾಮಲಿಂಗಾರೆಡ್ಡಿ ಇಂದಿಗೂ ಇಲ್ಲಿ ಹಿಡಿತ ಇಟ್ಟುಕೊಂಡಿದ್ದಾರೆ.

BTM Layout ground report
ಬಿಟಿಎಂ ಲೇಔಟ್ ಕ್ಷೇತ್ರನೋಟ
author img

By

Published : May 5, 2023, 1:25 PM IST

Updated : May 5, 2023, 4:02 PM IST

ಬೆಂಗಳೂರು: ನಗರದ ಪ್ರಮುಖ ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಟಿಎಂ (ಭೈರಸಂದ್ರ, ತಾವರೆಕೆರೆ, ಮಡಿವಾಳ) ಲೇಔಟ್ ಕ್ಷೇತ್ರ ಸಹ ಒಂದು. ಕ್ಷೇತ್ರದ ಪುನರ್ ವಿಂಗಡಣೆಯಾದ ವರ್ಷದಿಂದ ಇಲ್ಲಿಯವರೆಗೆ ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ಈ ಹಿಂದೆ ಜಯನಗರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ರಾಮಲಿಂಗಾರೆಡ್ಡಿ ಅವರು ಅಲ್ಲಿಂದ ಈವರೆಗೆ ಏಳು ಬಾರಿ ಗೆಲುವು ಸಾಧಿಸಿದ್ದಾರೆ.

ಅತ್ಯಂತ ಹಿರಿಯ ಕಾಂಗ್ರೆಸ್ ನಾಯಕ: ಜಯನಗರ ಕ್ಷೇತ್ರದಲ್ಲಿ ನಾಲ್ಕು ಬಾರಿ ಜಯಗಳಿಸಿದ್ದ ಅವರು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ನಂತರ ಹೊಸದಾಗಿ ರಚನೆಯಾದ ಬಿಟಿಎಂ ಲೇಔಟ್ ಕ್ಷೇತ್ರಕ್ಕೆ ಬಂದರು. ಇಲ್ಲೂ ಸಹ ಮೂರು ಬಾರಿ ಗೆಲುವು ಕಂಡ ರಾಮಲಿಂಗಾರೆಡ್ಡಿ, ಅಲ್ಲಿಂದ ಇಲ್ಲಿಯವರೆಗೂ ಈ ಕ್ಷೇತ್ರದಲ್ಲಿ ಹಿಡಿತ ಇಟ್ಟುಕೊಂಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಅತ್ಯಂತ ಹಿರಿಯ ಕಾಂಗ್ರೆಸ್ ನಾಯಕರೆಂದರೆ ಅದು ರಾಮಲಿಂಗಾರೆಡ್ಡಿ. ಶಾಂತ ಸ್ವಭಾವದ ರೆಡ್ಡಿ ಅವರು, ಜನರ ಹತ್ತಿರಕ್ಕೆ ಹೋಗುತ್ತಾರೆ. ಜನರಿಗೆ ತಕ್ಷಣ ಸ್ಪಂದಿಸುತ್ತಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತವೆ. ಅಲ್ಲದೇ ವರ್ಷದಿಂದ ವರ್ಷಕ್ಕೆ ಅವರು ತಮ್ಮ ಮತದಾರರ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ.

ಬಿಟಿಎಂ ಲೇಔಟ್ ಕ್ಷೇತ್ರ ವ್ಯಾಪ್ತಿಗೆ ಈಜೀಪುರ, ಬಿಟಿಎಂ ಲೇಔಟ್ 1 ಮತ್ತು 2ನೇ ಹಂತ, ಲಕ್ಕಸಂದ್ರ, ಮಡಿವಾಳ, ಕೋರಮಂಗಲ, ಆಡುಗೋಡಿ, ಸುದ್ದುಗುಂಟೆಪಾಳ್ಯ, ಜಕ್ಕಸಂದ್ರ ವಾರ್ಡ್​ಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಕೊಳಗೇರಿಗಳು ಹೆಚ್ಚಿರುವ ಕಾರಣ ಅಭಿವೃದ್ಧಿ ಕಾಣಬೇಕಾದ ಪ್ರದೇಶಗಳು ಸಾಕಷ್ಟಿವೆ. ಹಲವು ವರ್ಷಗಳಿಂದ ಮೂಲ ಸೌಲಭ್ಯಗಳ ಕೊರತೆ ಇದೆ. ಇದರ ಜತೆಗೆ ಸಂಚಾರ ದಟ್ಟಣೆ ಸಮಸ್ಯೆಯೂ ಒಂದು. ಹೆಚ್ಚು ಮಧ್ಯಮ ಹಾಗೂ ಕೆಳವರ್ಗದ ಜನರು ಈ ಕ್ಷೇತ್ರದಲ್ಲಿ ವಾಸಿಸುತ್ತಿದ್ದಾರೆ.

ಕಳೆದ ಮೂರು ಚುನಾವಣೆ ಫಲಿತಾಂಶ: 2018ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ಅವರು ಬಿಜೆಪಿ ಅಭ್ಯರ್ಥಿ ಲಲ್ಲೇಶ್ ರೆಡ್ಡಿ ಅವರನ್ನು 20,478 ಮತಗಳ ಅಂತರದಿಂದ ಸೋಲಿಸುವ ಮೂಲಕ ವಿಧಾನಸಭೆ ಪ್ರವೇಶ ಮಾಡಿದರು. ರಾಮಲಿಂಗಾ ರೆಡ್ಡಿ ಒಟ್ಟು 67,085 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಲಲ್ಲೇಶ್​ ರೆಡ್ಡಿ 46,607 ಮತ ಪಡೆದು ಎರಡನೇ ಸ್ಥಾನಕ್ಕೆ ಕುಸಿದಿದ್ದರು. ಜೆಡಿಎಸ್​ ಅಭ್ಯರ್ಥಿ 17,307 ಪಡೆದು ಮೂರನೇ ಸ್ಥಾನಕ್ಕೆ ಇಳಿದಿದ್ದರು.

2013 ರಲ್ಲಿ ಕ್ಷೇತ್ರವು ಒಟ್ಟು 2,06,974 ಮತದಾರರನ್ನು ಹೊಂದಿತ್ತು. ಒಟ್ಟು ಮಾನ್ಯ ಮತಗಳ ಸಂಖ್ಯೆ 1,10,486. ಕಾಂಗ್ರೆಸ್​ ಅಭ್ಯರ್ಥಿ ರಾಮಲಿಂಗಾ ರೆಡ್ಡಿ 69,712 ಮತ ಪಡೆದು ಇದೇ ಕ್ಷೇತ್ರದಿಂದ ಎರಡನೇ ಬಾರಿ ಶಾಸಕರಾದರು. ಬಿಜೆಪಿ ಅಭ್ಯರ್ಥಿ ಎನ್ ಸುಧಾಕರ್ 20,664 ಮತ ಪಡೆದು ಎರಡನೇ ಸ್ಥಾನಕ್ಕೆ ಕುಸಿದರು. ರಾಮಲಿಂಗಾ ರೆಡ್ಡಿ ಈ ಚುನಾವಣೆಯಲ್ಲಿ 49,048 ಮತಗಳಿಂದ ಗೆಲುವು ಕಂಡರು. 83,46 ಮತ ಜೆಡಿಎಸ್​ ಅಭ್ಯರ್ಥಿ ಸ್ಥಾನ ಮೂರಲ್ಲಿದ್ದರು.

2008 ರಲ್ಲಿ ಕ್ಷೇತ್ರವು ಒಟ್ಟು 2,16,392 ಮತದಾರರನ್ನು ಹೊಂದಿತ್ತು. ಒಟ್ಟು ಮಾನ್ಯ ಮತಗಳ ಸಂಖ್ಯೆ 1,01,182. ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾ ರೆಡ್ಡಿ 46,811 ಮತಗಳನ್ನು ಪಡೆದು ಮೂರನೇ ಬಾರಿ ಗೆದ್ದು ಸಚಿವರಾದರು. 44,954 ಮತ ಪಡೆದ ಬಿಜೆಪಿ ಅಭ್ಯರ್ಥಿ ಜಿ ಪ್ರಸಾದ್ ರೆಡ್ಡಿ ಎರಡನೇ ಸ್ಥಾನಕ್ಕೆ ಕುಸಿದಿದ್ದರೆ, 6,031 ಮತ ಪಡೆದ ಜೆಡಿಎಸ್​ ಅಭ್ಯರ್ಥಿ ಸ್ಥಾನ ಮೂರರಲ್ಲಿದ್ದರು. ರಾಮಲಿಂಗಾ ರೆಡ್ಡಿ 1857 ಮತಗಳಿಂದ ಗೆದ್ದಿದ್ದರು.

ಸಮಸ್ಯೆಗಳೇನು?: ಮಡಿವಾಳ ಕೆರೆ ಅಭಿವೃದ್ಧಿಪಡಿಸಲಾಗಿದೆ. ಜತೆಗೆ ಪಾರ್ಕ್​ಗಳು, ರಸ್ತೆ ಮತ್ತಿತರ ಅಭಿವೃದ್ಧಿ ಕೆಲಸಗಳು ಕ್ಷೇತ್ರದಲ್ಲಿ ಆಗಿದೆ. ಆದರೆ, ಈ ಕ್ಷೇತ್ರದಲ್ಲಿ ಶೌಚಾಲಯಗಳ ಕೊರತೆ ಬಹಳಷ್ಟು ಇದೆ. ಕುಡಿವ ನೀರಿನ ವ್ಯವಸ್ಥೆಯೂ ಆಗಬೇಕಿದೆ ಎನ್ನುತ್ತಾರೆ ಸ್ಥಳೀಯರು.

"ನಾನು ಈಗಿನ ಚುನಾವಣೆ ಬಗ್ಗೆ ಮಾತನಾಡುವುದಿಲ್ಲ. 87 ವರ್ಷದಿಂದ ಹಲವಾರು ನಾಯಕರನ್ನು ಕಂಡಿದ್ದೇನೆ. ಹಿಂದಿನ ಚುನಾವಣೆಗೂ, ಈಗಿನ ಚುನಾವಣೆಗೂ ತುಂಬಾ ವ್ಯತ್ಯಾಸ ಇದೆ. ಈಗ ಹಣಕ್ಕಾಗಿ ಮತಗಳು ಮಾರಾಟವಾಗುತ್ತಿವೆ. ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ" ಎಂದು ಹೆಸರು ಹೇಳಲು ಇಚ್ಚಿಸದ ಮೈಕೋ ಲೇಔಟ್ ನಿವಾಸಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

BTM Layout ground report
ಬಿಟಿಎಂ ಲೇಔಟ್ ಕ್ಷೇತ್ರನೋಟ

ಮತದಾರರೆಷ್ಟು?: ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಒಟ್ಟು 2,64,553 ಮತದಾರರಿದ್ದಾರೆ. 1,38,299 ಪುರುಷ, 1,26,212 ಮಹಿಳಾ ಹಾಗೂ 42 ಮಂದಿ ತೃತೀಯ ಲಿಂಗಿಗಳಿದ್ದಾರೆ.

3 ಬಾರಿಯೂ ಗೆದ್ದು ಬೀಗಿದ ಕಾಂಗ್ರೆಸ್​​: ಬಿಟಿಎಂ ಲೇಔಟ್ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ 3 ಚುನಾವಣೆಗಳು ನಡೆದಿವೆ. ಮೂರು ಬಾರಿಯೂ ಕಾಂಗ್ರೆಸ್ ಗೆದ್ದಿದೆ. ಒಂದು ರೀತಿಯಲ್ಲಿ ಹೇಳುವುದಾದರೆ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಆದರೆ, ಆಗಿನಿಂದಲೂ ಬಿಜೆಪಿ ನಿರಂತರವಾಗಿ ಪೈಪೋಟಿ ನೀಡುತ್ತಲೇ ಬಂದಿದೆ. ಈ ಬಾರಿಯೂ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದೆ.

ರಾಮಲಿಂಗಾರೆಡ್ಡಿ ಎದುರು ಬಿಟಿಎಂ ಕ್ಷೇತ್ರದಲ್ಲಿ ಮೂರು ಬಾರಿಯೂ ಬಿಜೆಪಿ ತನ್ನ ಅಭ್ಯರ್ಥಿಯನ್ನು ಬದಲಿಸಿದೆ. ರಾಮಲಿಂಗಾರೆಡ್ಡಿ ಓಟಕ್ಕೆ ಬ್ರೇಕ್ ಹಾಕಲು ಬಿಜೆಪಿ ಹೊಸ ತಂತ್ರ ರೂಪಿಸುವ ಮೂಲಕ ಈ ಬಾರಿ ಶ್ರೀಧರ್ ರೆಡ್ಡಿ ಅವರಿಗೆ ಟಿಕೆಟ್ ನೀಡಿದೆ. ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ಸಹ ಅಭ್ಯರ್ಥಿಯನ್ನು ಬದಲಿಸಿದ್ದು, ಎಂ.ವೆಂಕಟೇಶ್ ಎಂಬುವರಿಗೆ ಟಿಕೆಟ್ ನೀಡಿದೆ. ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಐವರು ಪಕ್ಷೇತರರು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ 12 ಮಂದಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಬ್ಬರದ ಪ್ರಚಾರದಲ್ಲಿ ಜೆಡಿಎಸ್ ಮಂಕಾಗಿದೆ.

ಹೆಚ್ಚಿದ ಜವಾಬ್ದಾರಿ: ಬೆಂಗಳೂರಿನ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡಿರುವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಜಯನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕಳೆದ ಬಾರಿ ಉಪ ಚುನಾವಣೆಯಲ್ಲಿ ಜಯನಗರದಿಂದ ಮಗಳನ್ನು ಗೆಲ್ಲಿಸುವ ಮೂಲಕ ಮತ್ತೆ ಜಯನಗರ ಕ್ಷೇತ್ರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿಯೂ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಸ್ಪರ್ಧೆ ಮಾಡಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯೂ ರಾಮಲಿಂಗಾರೆಡ್ಡಿ ಅವರ ಮೇಲೆ ಇದೆ.

ಬಿಜೆಪಿ ವಿರುದ್ಧ ವಾಗ್ದಾಳಿ: ರಾಮಲಿಂಗಾರೆಡ್ಡಿ ಅವರು ಬಿಟಿಎಂ ಲೇಔಟ್ ಹಾಗೂ ಜಯನಗರ ಕ್ಷೇತ್ರಗಳೆರಡರಲ್ಲೂ ಪ್ರಚಾರ ನಡೆಸುತ್ತಿದ್ದಾರೆ. ಹೆಚ್ಚು ತಮಿಳು ಭಾಷಿಕರು ಇರುವ ಈಜೀಪುರ, ಆಡುಗೋಡಿ ಮತ್ತಿತರ ಕಡೆ ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ರಾಮಲಿಂಗಾರೆಡ್ಡಿ ಅವರಿಗೆ ಸಾಥ್ ನೀಡಿದ್ದಾರೆ. 'ಮನೆ ಮನೆಗೂ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಸಭೆ ಮೂಲಕ ಜನರನ್ನು ಸಂಪರ್ಕ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕೆಲಸ ಹೊರತುಪಡಿಸಿದರೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಅಂತಾರೆ ಶಾಸಕ ರಾಮಲಿಂಗಾ ರೆಡ್ಡಿ.

’’ಕೋರಮಂಗಲದಲ್ಲಿ ಫ್ಲೈಓವರ್ ಕೇಳಿದ್ದಾರೆ. ಅದನ್ನು ನಾವೇ ಪ್ರಾರಂಭ ಮಾಡಿದ್ದೆವು. ಅಷ್ಟರಲ್ಲಿ ಬಿಜೆಪಿ ಸರ್ಕಾರ ಬಂತು. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಉದ್ಯೋಗ ಕೊಡಲಿಲ್ಲ. ಇನ್ನು ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಇದೆ. ಇದರಿಂದ ಅಭಿವೃದ್ಧಿ ಹೇಗೆ ಸಾಧ್ಯ. ದೀಪ ಬೆಳಗಿಸಿ ಕಮಲ ಅರಳಿಸಿ ಎಂದು ಬಿಜೆಪಿ ಪ್ರಚಾರ ಮಾಡುತ್ತಿದೆ. ದೀಪ ಬೆಳಗಿಸಿ ಎಂದು ದೀಪ ಕೊಟ್ಟರೆ ಜನ ಮತ ಹಾಕುತ್ತಾರಾ?. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಾಗಿದೆ. ಇದನ್ನು ನೋಡಬೇಕಲ್ಲವೆ?. ಚಿನ್ನದ ದೀಪ ಕೊಟ್ಟರೂ ಮತ ಹಾಕಲ್ಲ’’ ಎಂದು ಬಿಜೆಪಿ ವಿರುದ್ಧ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

"ಈ ಕ್ಷೇತ್ರದಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ರಸ್ತೆಗಳು ಅಭಿವೃದ್ಧಿಯಾಗಿಲ್ಲ ಎಂಬುದು ಪ್ರಚಾರದ ವೇಳೆ ಗೊತ್ತಾಗಿದೆ. ಇನ್ನು ಹಲವಾರು ಸಮಸ್ಯೆಗಳು ಕ್ಷೇತ್ರದಲ್ಲಿ ಇದೆ. ಈ ಬಾರಿ ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ದಬ್ಬಾಳಿಕೆಯಿಂದ ಸ್ಥಳೀಯರು ಧೈರ್ಯವಾಗಿ ಮಾತನಾಡುತ್ತಿಲ್ಲ" ಎಂದು ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ದೂರಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ತ್ರಿಕೋನ ಸ್ಪರ್ಧೆ: ಜಮೀರ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಬಿಜೆಪಿ, ಜೆಡಿಎಸ್?

Last Updated : May 5, 2023, 4:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.