ETV Bharat / state

ವಿಧಾನಪರಿಷತ್ ಚುನಾವಣೆ.. ಜೆಡಿಎಸ್​ನಿಂದ ಎ ಪಿ ರಂಗನಾಥ್ ನಾಮಪತ್ರ ಸಲ್ಲಿಕೆ - Former CM HD kumaraswamy

ನಮ್ಮಲ್ಲೇ ಬೆಳೆದು ಅಧಿಕಾರ ಪಡೆದವರು (ಪುಟ್ಟಣ್ಣ), ಈಗ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಈ ಹಿಂದೆ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಸಾಕಷ್ಟು ನಕಲಿ ಮತದಾರರು ಇದ್ದರು. ಇದಕ್ಕೆಲ್ಲ ಕಡಿವಾಣ ಬೀಳುವಂತೆ ನೋಡಿಕೊಳ್ಳುತ್ತೇವೆ. ಅವರು ಚುನಾವಣೆ ಎದುರಿಸಲು ಆಗಲ್ಲ..

ಎ.ಪಿ ರಂಗನಾಥ್ ನಾಮಪತ್ರ ಸಲ್ಲಿಕೆ
ಎ.ಪಿ ರಂಗನಾಥ್ ನಾಮಪತ್ರ ಸಲ್ಲಿಕೆ
author img

By

Published : Oct 5, 2020, 5:11 PM IST

ಬೆಂಗಳೂರು : ಅಕ್ಟೋಬರ್​ 28ರಂದು ವಿಧಾನಪರಿಷತ್​ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಕೀಲರ ಸಂಘದ ಅಧ್ಯಕ್ಷ ಎ ಪಿ ರಂಗನಾಥ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಮಧ್ಯಾಹ್ನ ಎ ಪಿ ರಂಗನಾಥ್ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡ, ಅಪ್ಪಾಜಿಗೌಡ, ಶ್ರೀಕಂಠೇಗೌಡ, ರಮೇಶ್‌ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, 'ನಮ್ಮಲ್ಲೇ ಬೆಳೆದು ಅಧಿಕಾರ ಪಡೆದವರು (ಪುಟ್ಟಣ್ಣ), ಈಗ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಈ ಹಿಂದೆ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಸಾಕಷ್ಟು ನಕಲಿ ಮತದಾರರು ಇದ್ದರು. ಇದಕ್ಕೆಲ್ಲ ಕಡಿವಾಣ ಬೀಳುವಂತೆ ನೋಡಿಕೊಳ್ಳುತ್ತೇವೆ. ಅವರು ಚುನಾವಣೆ ಎದುರಿಸಲು ಆಗಲ್ಲ' ಎಂದು ಹೇಳಿದರು.

ನಾಳೆ ಅಭ್ಯರ್ಥಿಗಳ ಅಂತಿಮ : ಇದೇ ವೇಳೆ ಶಿರಾ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪಚುನಾವಣೆ ಕುರಿತು ಮಾತನಾಡಿದ ಹೆಚ್​ಡಿಕೆ, ಚುನಾವಣೆಯಲ್ಲಿ ಸೋಲು-ಗೆಲುವು ಬೇರೆ ಬೇರೆ. ನಾವು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ನಾಳೆ ಎರಡೂ ಕ್ಷೇತ್ರಗಳ ಅಭ್ಯರ್ಥಿ ಟಿಕೆಟ್ ಫೈನಲ್ ಮಾಡುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.